IND vs SA: ಸೌತ್ ಆಫ್ರಿಕಾ ವಿರುದ್ಧ ಗೆದ್ದರೆ ಇತಿಹಾಸ..!

South Africa vs India 2nd Test: 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಇನಿಂಗ್ಸ್​ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿತು. ಇದೀಗ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ 2ನೇ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸಾಕು.

TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2024 | 11:50 AM

ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ ಆರಂಭವಾಗಲಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಹೊಸ ಇತಿಹಾಸ ಬರೆಯುವ ಅವಕಾಶವಿದೆ.

1 / 5
ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಇನಿಂಗ್ಸ್​ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿತು. ಇದೀಗ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ 2ನೇ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸಾಕು. ಆದರೆ ಅತ್ತ ಟೀಮ್ ಇಂಡಿಯಾ ಗೆದ್ದರೆ ಮಾತ್ರ ಸರಣಿಯನ್ನು ಡ್ರಾ ಮಾಡಿಕೊಳ್ಳಬಹುದು.

2 / 5
ಒಂದು ವೇಳೆ ಕೇಪ್​ಟೌನ್​ನಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಹೊಸ ಇತಿಹಾಸವಂತು ನಿರ್ಮಾಣವಾಗಲಿದೆ. ಅದು ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿ ಎಂಬುದು ವಿಶೇಷ. ಅಂದರೆ ಭಾರತ ತಂಡವು ಸೌತ್ ಆಫ್ರಿಕಾದಲ್ಲಿ 9 ಟೆಸ್ಟ್ ಸರಣಿಗಳನ್ನು ಆಡಿದೆ.

3 / 5
ಈ ವೇಳೆ ಒಮ್ಮೆಯೂ ಭಾರತ ತಂಡ ಟೆಸ್ಟ್​ ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಸರಣಿಯೊಂದನ್ನು ಹೊರತುಪಡಿಸಿದರೆ ಉಳಿದ 8 ಸರಣಿಗಳಲ್ಲೂ ಟೀಮ್ ಇಂಡಿಯಾ ಪರಾಜಯಗೊಂಡಿದೆ.

4 / 5
ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ 1-1 ಅಂತರದಿಂದ ಡ್ರಾ ಆಗಲಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಬಳಿಕ ಸೌತ್ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಂಡ 2ನೇ ನಾಯಕ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ. ಅದರಂತೆ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

5 / 5
Follow us
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ