AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs BAN: ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಅರ್ಧಶತಕ: ಕೆಎಲ್ ರಾಹುಲ್ ಫುಲ್ ಖುಷ್

Quinton de Kock: ಈ ಸಾಧಾರಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಸ್ಪೋಟಕ ಆರಂಭ ಒದಗಿಸಿದರು.

TV9 Web
| Edited By: |

Updated on: Mar 20, 2022 | 9:09 PM

Share
 ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆದರೆ ಅತ್ತ ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ ನಡುವೆ ಸರಣಿ ನಡೆಯುತ್ತಿದೆ. ಈ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

1 / 5
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವು ಆರೀಫ್ ಹುಸೈನ್ (72) ಅವರ ಅರ್ಧಶತಕದ ನೆರವಿನಿಂದ 9 ವಿಕೆಟ್ ಕಳೆದುಕೊಂಡು 194 ರನ್​ಗಳಿಸಿತು.

2 / 5
ಈ ಸಾಧಾರಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 26 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಅಬ್ಬರಿಸಿದರು. 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 28ನೇ ಅರ್ಧಶತಕ  ಪೂರೈಸಿದ ಡಿಕಾಕ್ ಅಂತಿಮವಾಗಿ 62 ರನ್‌ಗಳಿಸಿದರು. ಅಷ್ಟರಲ್ಲಾಗಲೇ ಸೌತ್ ಆಫ್ರಿಕಾ ಗೆಲುವಿನತ್ತ ಮುಖಮಾಡಿತು.

3 / 5
ಅದರಂತೆ 37.2 ಓವರ್​ಗಳಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್ ನಷ್ಟಕ್ಕೆ 195 ರನ್​ಗಳಿಸಿ 7 ವಿಕೆಟ್​ಗಳ ಜಯ ಸಾಧಿಸಿತು. ವಿಶೇಷ ಎಂದರೆ ಡಿಕಾಕ್ ಅವರ ಈ ಸ್ಪೋಟಕ ಬ್ಯಾಟಿಂಗ್​ಗೆ ಇತ್ತ ಕೆಎಲ್ ರಾಹುಲ್ ಫುಲ್ ಖುಷ್ ಆಗಿದ್ದಾರೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಡಿಕಾಕ್ ಲಕ್ನೋ ಸೂಪರ್ ಜೈಂಟ್ಸ್​ ಪರ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5
ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಡಿಕಾಕ್ ವಿಕೆಟ್ ಕೀಪರ್ ಆಗಿ ಕೂಡ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಭರ್ಜರಿ ಫಾರ್ಮ್​ ಪ್ರದರ್ಶಿಸುವ ಮೂಲಕ ಡಿಕಾಕ್ ಐಪಿಎಲ್​ನಲ್ಲಿ ಅಬ್ಬರಿಸುವ ಸೂಚನೆ ನೀಡಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ