Shardul Thakur: ಹೊಸ ವರ್ಷದಂದು ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್: ಆಫ್ರಿಕಾದಲ್ಲಿ ಸ್ಟಾರ್ ಆಟಗಾರನಿಗೆ ಇಂಜುರಿ
South Africa vs India 2nd Test: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ತಯಾರಿ ನಡೆಸುತ್ತಿರುವಾಗ ಭಾರತದ ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಇಂಜುರಿಗೆ ತುತ್ತಾಗಿದ್ದಾರೆ. ನೆಟ್ಸ್‌ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡುವಾಗ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ.
1 / 6
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಎರಡು ಟೆಸ್ಟ್‌ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ 0-1 ಹಿನ್ನಡೆಯಲ್ಲಿದೆ.
2 / 6
ಮೊದಲ ಟೆಸ್ಟ್ನಲ್ಲಿ ಭಾರತ ಇನ್ನಿಂಗ್ಸ್ ಹಾಗೂ 32 ರನ್ ಗಳಿಂದ ಸೋಲು ಕಂಡಿತ್ತು. ಈ ಸೋಲಿನ ಸೇಡು ತೀರಿಸಿಕೊಂಡು ಟೀಮ್ ಇಂಡಿಯಾ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಜ್ಜಾಗಿದೆ. ಆದರೆ ಎರಡನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಒಂದು ಕೆಟ್ಟ ಸುದ್ದಿಯಿದೆ.
3 / 6
ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ತಯಾರಿ ನಡೆಸುತ್ತಿರುವಾಗ ಭಾರತದ ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಇಂಜುರಿಗೆ ತುತ್ತಾಗಿದ್ದಾರೆ. ನೆಟ್ಸ್‌ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡುವಾಗ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ. ಆದರೆ, ಭುಜಕ್ಕೆ ಚೆಂಡು ಬಡಿದ ನಂತರವೂ ಠಾಕೂರ್ ಬ್ಯಾಟಿಂಗ್ ಮುಂದುವರಿಸಿದ್ದಾರಂತೆ.
4 / 6
ಥ್ರೋಡೌನ್‌ನಿಂದ ಚೆಂಡುಗಳನ್ನು ಅಭ್ಯಾಸ ಮಾಡುತ್ತಿದ್ದಾಗ ವಿಕ್ರಮ್ ರಾಥೋಡ್ ಎಸೆದ ಬಾಲ್ ಶಾರ್ದೂಲ್ ಠಾಕೂರ್ ಅವರ ಭುಜಕ್ಕೆ ಬಡಿದಿದೆ. ಅಭ್ಯಾಸದ 15 ನಿಮಿಷಗಳಲ್ಲಿ ಅವರು ಗಾಯಗೊಂಡರು. ಮೊದಲ ಟೆಸ್ಟ್ ತಂಡದಲ್ಲಿದ್ದ ಶಾರ್ದೂಲ್ ಎರಡನೇ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ? ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
5 / 6
ಮೊದಲ ಟೆಸ್ಟ್ನಲ್ಲಿ ಭಾರತದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಬಿಟ್ಟರೆ ಮತ್ಯಾರು ಪರಿಣಾಮಕಾರಿಯಾಗಿ ಗೋಚರಿಸಲಿಲ್ಲ. ಶಾರ್ದೂಲ್ ಠಾಕೂರ್ ಏಕದಿನದಂತೆ ರನ್ ಕೊಟ್ಟಿದ್ದರು. ಆವೇಶ್ ಖಾನ್ ಎರಡನೇ ಟೆಸ್ಟ್ಗೆ ಆಯ್ಕೆ ಆಗಿರುವ ಕಾರಣ ಶಾರ್ದೂಲ್ ಜಾಗದಲ್ಲಿ ಇವರು ಆಡುವ ಸಾಧ್ಯತೆ ಇದೆ.
6 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಅವೇಶ್ ಖಾನ್.