IND vs SA: ಆಫ್ರಿಕಾ ನೆಲದಲ್ಲಿ ಧೋನಿ ನಂತರ ಈ ದಾಖಲೆ ಮಾಡಿದ 2ನೇ ನಾಯಕ ರೋಹಿತ್..!
IND vs SA: ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದೆ. ಇಲ್ಲಿಯವರೆಗೆ ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆದರೆ, ದಕ್ಷಿಣ ಆಫ್ರಿಕಾದಲ್ಲಿ ಭಾರತ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡಿದ್ದು ಇದು ಎರಡನೇ ಬಾರಿ.
1 / 6
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಇತಿಹಾಸ ನಿರ್ಮಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 07 ವಿಕೆಟ್‌ಗಳ ಜಯ ಸಾಧಿಸಿದೆ.
2 / 6
ಪಂದ್ಯದ ಎರಡನೇ ದಿನದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 1-1 ರಿಂದ ಸರಣಿಯನ್ನು ಸಮಬಲಗೊಳಿಸಿದೆ. ಹಾಗೆಯೇ ಸರಣಿಯನ್ನು ಡ್ರಾದೊಂದಿಗೆ ಅಂತ್ಯಗೊಳಿಸುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎಂಎಸ್ ಧೋನಿ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.
3 / 6
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದೆ. ಇಲ್ಲಿಯವರೆಗೆ ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆದರೆ, ದಕ್ಷಿಣ ಆಫ್ರಿಕಾದಲ್ಲಿ ಭಾರತ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡಿದ್ದು ಇದು ಎರಡನೇ ಬಾರಿ.
4 / 6
ಇದಕ್ಕೂ ಮೊದಲು 2010-11ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು. ಇದೀಗ ರೋಹಿತ್ ಶರ್ಮಾ ಆ ಸಾಧನೆ ಮಾಡುವ ಮೂಲಕ ಎಂಎಸ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ.
5 / 6
ಟೀಂ ಇಂಡಿಯಾ ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ 7 ನಾಯಕರ ಅಡಿಯಲ್ಲಿ ಟೆಸ್ಟ್ ಸರಣಿಯನ್ನು ಆಡಿದೆ. ಆದರೆ ಇಬ್ಬರು ನಾಯಕರು ಮಾತ್ರ ಸರಣಿ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ 5 ನಾಯಕರು ಸರಣಿ ಸೋಲನ್ನು ಎದುರಿಸಿದ್ದಾರೆ.
6 / 6
ಕೇಪ್ ಟೌನ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಮತ್ತೊಂದು ದೊಡ್ಡ ದಾಖಲೆ ನಿರ್ಮಿಸಿದೆ. ಇದಕ್ಕೂ ಮೊದಲು ಈ ಮೈದಾನದಲ್ಲಿ ಉಭಯ ತಂಡಗಳ ನಡುವೆ ಒಟ್ಟು 6 ಟೆಸ್ಟ್ ಪಂದ್ಯಗಳು ನಡೆದಿದ್ದು, 4ರಲ್ಲಿ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು. ಉಳಿದಂತೆ 2 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಇದೀಗ 7ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ.