SA vs IND: ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಲು ಸೂರ್ಯನಿಗೆ 15 ರನ್​ಗಳಷ್ಟೇ ಬೇಕು..!

Updated on: Dec 11, 2023 | 11:27 AM

SA vs IND: ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

1 / 7
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

2 / 7

ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಅವರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

3 / 7

ವಾಸ್ತವವಾಗಿ, ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

4 / 7

ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್‌ಗಳ ಗಡಿ ದಾಟಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ 55 ಇನ್ನಿಂಗ್ಸ್‌ಗಳಲ್ಲಿ 44.11 ಸರಾಸರಿ ಮತ್ತು 171.71 ಸ್ಟ್ರೈಕ್ ರೇಟ್‌ನಲ್ಲಿ 1985 ರನ್ ಬಾರಿಸಿದ್ದಾರೆ.

5 / 7

ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಈ ವಿಶೇಷ ಕ್ಲಬ್ ಸೇರಲು ದೊಡ್ಡ ಅವಕಾಶವಿದೆ. ಈ ಮೊದಲು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

6 / 7

ಇನ್ನು ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ ಹಾಗೂ ವಿಕೆಟ್​ಕೀಪರ್ ಮೊಹಮ್ಮದ್ ರಿಜ್ವಾನ್ ತಲಾ 52 ಇನ್ನಿಂಗ್ಸ್​ಗಳಲ್ಲಿ 2000 ರನ್​ಗಳ ಗಡಿ ದಾಟಿದ್ದರು.

7 / 7

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರಮವಾಗಿ 56 ಹಾಗೂ 58 ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದಾರೆ.

Loading...
Unable to load recommendations.
Follow Us