- Kannada News Photo gallery Cricket photos SA Vs IND Virat Kohli To Be Key Factor As India win Maiden Test Series In South Africa says Jacques Kallis
SA vs IND: ‘ಈತ ಅಬ್ಬರಿಸಿದರೆ ಆಫ್ರಿಕಾ ನೆಲದಲ್ಲಿ ಭಾರತ ಟೆಸ್ಟ್ ಸರಣಿ ಗೆಲ್ಲುವುದು ಖಚಿತ’; ಜಾಕ್ವೆಸ್ ಕಾಲಿಸ್
SA vs IND: ಟೆಸ್ಟ್ ಸರಣಿ ಗೆಲುವಿಗೆ ಸಂಬಂದಿಸಿದಂತೆ ದೊಡ್ಡ ಹೇಳಿಕೆ ನೀಡಿರುವ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಲ್ರೌಂಡರ್ ಜಾಕ್ವೆಸ್ ಕಾಲಿಸ್, ಭಾರತ ನಮ್ಮ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂದರೆ ಅದು ವಿರಾಟ್ ಕೊಹ್ಲಿ ಆಟದ ಮೇಲೆ ನಿಂತಿದೆ ಎಂದಿದ್ದಾರೆ.
Updated on: Dec 11, 2023 | 10:53 AM

ಭಾರತ ಕ್ರಿಕೆಟ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಇಲ್ಲಿ ಉಭಯ ತಂಡಗಳ ನಡುವೆ ಟಿ20 ಮತ್ತು ಏಕದಿನ ಸರಣಿಯ ನಂತರ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲ್ಲಿದೆ. ಈ ಸರಣಿ ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಅದಕ್ಕೆ ಕಾರಣವೂ ಇದೆ.

ವಾಸ್ತವವಾಗಿ ಟೀಂ ಇಂಡಿಯಾ ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ರೋಹಿತ್ ಶರ್ಮಾ ನಾಯಕತ್ವದ ಟೆಸ್ಟ್ ಪಡೆ ಈ ಬಾರಿ ಈ ಹಳೆಯ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸಲಿದೆ.

ಟೆಸ್ಟ್ ಸರಣಿ ಗೆಲುವಿಗೆ ಸಂಬಂದಿಸಿದಂತೆ ದೊಡ್ಡ ಹೇಳಿಕೆ ನೀಡಿರುವ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಲ್ರೌಂಡರ್ ಜಾಕ್ವೆಸ್ ಕಾಲಿಸ್, ಭಾರತ ನಮ್ಮ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂದರೆ ಅದು ವಿರಾಟ್ ಕೊಹ್ಲಿ ಆಟದ ಮೇಲೆ ನಿಂತಿದೆ ಎಂದಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಈ ಬಗ್ಗೆ ಮಾತನಾಡಿದ ಕಾಲಿಸ್, ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರ ಆಟ ಭಾರತದ ಸರಣಿ ಗೆಲುವಿನ ಕನಸಿನಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ. ಭಾರತವು ದಕ್ಷಿಣ ಆಫ್ರಿಕಾವನ್ನು ಸೋಲಿಸಲು ಬಯಸಿದರೆ, ವಿರಾಟ್ ಕೊಹ್ಲಿ ಈ ಟೆಸ್ಟ್ ಸರಣಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಮತ್ತು ರನ್ ಗಳಿಸಬೇಕು ಎಂದು ಕಾಲಿಸ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ದೊಡ್ಡ ಆಟಗಾರ ಮತ್ತು ಅವರು ಇಡೀ ವಿಶ್ವದ ಯಾವುದೇ ಪಿಚ್‌ನಲ್ಲಿ ರನ್ ಗಳಿಸಬಹುದು ಎಂದು ಜಾಕ್ವೆಸ್ ಕಾಲಿಸ್ ಹೇಳಿದ್ದಾರೆ. ‘ಕೊಹ್ಲಿ ಇಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ ಮತ್ತು ಇಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿ ಕೂಡ ಆಗಿದ್ದಾರೆ.

ವಿರಾಟ್ ಅವರ ಅನುಭವ ಯುವ ಆಟಗಾರರಿಗೆ ಸಾಕಷ್ಟು ಸಹಾಯ ಮಾಡಬಹುದಾಗಿದೆ. ತಮ್ಮ ಅನುಭವದ ಆಧಾರದ ಮೇಲೆ ಆಟಗಾರರಿಗೆ ಇಲ್ಲಿನ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕು ಎಂದು ಅವರು ಮನವರಿಕೆ ಮಾಡಿಕೊಡಬಹುದಾಗಿದೆ ಎಂದಿದ್ದಾರೆ.

ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. 2023 ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ 11 ಇನ್ನಿಂಗ್ಸ್‌ಗಳಲ್ಲಿ 765 ರನ್ ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಏಕದಿನ ವಿಶ್ವಕಪ್‌ನ ಒಂದೇ ಸೀಸನ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಸಹ ಸೃಷ್ಟಿಸಿದರು.

ವಿರಾಟ್‌ನ ಈ ಫಾರ್ಮ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಹೆಚ್ಚು ಉಪಯುಕ್ತವಾಗಲಿದೆ. ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್‌ನಲ್ಲಿ ಕೊಹ್ಲಿ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು ಆಫ್ರಿಕಾ ನೆಲದಲ್ಲಿ ಆಡಿರುವ 14 ಇನ್ನಿಂಗ್ಸ್‌ಗಳಲ್ಲಿ 51.36 ಸರಾಸರಿಯಲ್ಲಿ 719 ರನ್ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 3 ಅರ್ಧ ಶತಕಗಳು ಸೇರಿವೆ.
























