AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಬೌಲರ್​ಗಳ ಮುಂದೆ ಬಾಷ್ ಬಾಸ್: ಹೊಸ ವಿಶ್ವ ದಾಖಲೆ ನಿರ್ಮಾಣ

South Africa vs Pakistan: ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಸೌತ್ ಆಫ್ರಿಕಾ ಆಟಗಾರ ಕಾರ್ಬಿನ್ ಬಾಷ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಚೊಚ್ಚಲ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 28, 2024 | 10:25 AM

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಬೌಲರ್ ಕಾರ್ಬಿನ್ ಬಾಷ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ವರ್ಲ್ಡ್ ರೆಕಾರ್ಡ್ ನಿರ್ಮಾಣವಾಗಿರುವುದು ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಕಮ್ರಾನ್ ಗುಲಾಮ್ (54) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 211 ರನ್​​ಗಳಿಸಿ ಆಲೌಟ್ ಆಗಿದೆ. ಸೌತ್ ಆಫ್ರಿಕಾ ಪರ ಡೇನ್ ಪ್ಯಾಟರ್ಸನ್ 5 ವಿಕೆಟ್ ಪಡೆದರೆ, ಕಾರ್ಬಿನ್ ಬಾಷ್ 4 ವಿಕೆಟ್ ಕಬಳಿಸಿದರು.

2 / 8
ಇದಾದ ಬಳಿಕ ಪ್ರಥಮ ಇನಿಂಗ್ಸ್ ಶುರು ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಐಡೆನ್ ಮಾರ್ಕ್ರಾಮ್ (89) ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೌತ್ ಆಫ್ರಿಕಾ ತಂಡವು 191 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

3 / 8
ಈ ಹಂತದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಾರ್ಬಿನ್ ಬಾಷ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಪಾಕ್ ಬೌಲರ್​​ಗಳನ್ನು ಲೀಲಾಜಾಲವಾಗಿ ಎದುರಿಸಿದ ಬಾಷ್ ಬರೋಬ್ಬರಿ 15 ಫೋರ್​ಗಳನ್ನು ಸಿಡಿಸಿದರು. ಅಲ್ಲದೆ 93 ಎಸೆತಗಳಲ್ಲಿ ಅಜೇಯ 81 ರನ್ ಬಾರಿಸಿದರು.

4 / 8
ಈ 81 ರನ್​ಗಳೊಂದಿಗೆ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕಾರ್ಬಿನ್ ಬಾಷ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಿಲನ್ ರತ್ನಾಯಕೆ ಹೆಸರಿನಲ್ಲಿತ್ತು.

5 / 8
2024 ರಲ್ಲಿ ಮ್ಯಾಚೆಂಸ್ಟರ್​​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಮಿಲನ್ ರತ್ನಾಯಕೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 135 ಎಸೆತಗಳಲ್ಲಿ 72 ರನ್ ಬಾರಿಸಿದ್ದರು. ಈ ಮೂಲಕ ಶ್ರೀಲಂಕಾ ಬೌಲರ್ ಚೊಚ್ಚಲ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

6 / 8
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕಾರ್ಬಿನ್ ಬಾಷ್ ಯಶಸ್ವಿಯಾಗಿದ್ದಾರೆ. ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿರುವ ಬಾಷ್ ಮೊದಲ ಮ್ಯಾಚ್​ನಲ್ಲೇ ಅಜೇಯ 81 ರನ್ ಸಿಡಿಸಿದ್ದಾರೆ. ಈ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

7 / 8
ಇನ್ನು ಚೊಚ್ಚಲ ಪಂದ್ಯದಲ್ಲಿ 4 ವಿಕೆಟ್​​ಗಳೊಂದಿಗೆ ಅರ್ಧಶತಕ ಬಾರಿಸಿದ ಸೌತ್ ಆಫ್ರಿಕಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಕಾರ್ಬಿನ್ ಬಾಷ್ ಪಾತ್ರರಾಗಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲೇ ಬಾಷ್ ಎರಡು ಭರ್ಜರಿ ದಾಖಲೆಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

8 / 8
Follow us
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್

ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ

ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ

12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು

ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?

ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ

ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ

ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?