AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20 Final: ಎಸ್​ಎ20 ಲೀಗ್​ನಲ್ಲಿ ಸನ್​ರೈಸರ್ಸ್ ತಂಡ​ ಚಾಂಪಿಯನ್ಸ್

Pretoria Capitals vs Sunrisers Eastern Cape: ಸುಲಭ ಗುರಿ ಪಡೆದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಆರಂಭಿಕ ಆಟಗಾರ ಆಡಮ್ ರೋಸಿಂಗ್ಟನ್ ಸ್ಪೋಟಕ ಆರಂಭ ಒದಗಿಸಿದ್ದರು.

TV9 Web
| Edited By: |

Updated on: Feb 12, 2023 | 10:32 PM

Share
SA20 Final: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ದಿ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಫೈಟ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಬೌಲಿಂಗ್ ಆಯ್ಕೆ ಮಾಡಿತ್ತು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಬೌಲರ್​ಗಳು ಯಶಸ್ವಿಯಾಗಿದ್ದರು. ಅತ್ಯುತ್ತಮ ದಾಳಿ ಸಂಘಟಿಸಿದ ವ್ಯಾನ್ ಡೆರ್ ಮೆರ್ವೆ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದರು.

2 / 7
ಇತ್ತ ಕ್ರೀಸ್​ ಕಚ್ಚಿ ನಿಲ್ಲಲು ಪ್ರಿಟೋರಿಯಾ ಕ್ಯಾಪಿಟಲ್ಸ್ ಬ್ಯಾಟ್ಸ್​ಮನ್​ಗಳು ಪರದಾಡಿದರು. ಪರಿಣಾಮ 19.3 ಓವರ್​ಗಳಲ್ಲಿ ಕ್ಯಾಪಿಟಲ್ಸ್​ ತಂಡವು 135 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಕುಸಾಲ್ ಮೆಂಡಿಸ್ 21 ರನ್​ಗಳಿಸಿದ್ದು ಗರಿಷ್ಠ ಸ್ಕೋರ್.

3 / 7
136 ರನ್​ಗಳ ಸುಲಭ ಗುರಿ ಪಡೆದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಆರಂಭಿಕ ಆಟಗಾರ ಆಡಮ್ ರೋಸಿಂಗ್ಟನ್ ಸ್ಪೋಟಕ ಆರಂಭ ಒದಗಿಸಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರೋಸಿಂಗ್ಟನ್ 30 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 57 ರನ್​ ಚಚ್ಚಿದರು.

4 / 7
ಆ ಬಳಿಕ ಬಂದ ಜೋರ್ಡನ್ ಹರ್ಮನ್ 22 ರನ್​ಗಳ ಕಾಣಿಕೆ ನೀಡಿದರೆ, ನಾಯಕ ಐಡೆನ್ ಮಾರ್ಕ್ರಾಮ್ 26 ರನ್​ ಕಲೆಹಾಕಿದರು. ಅದರಂತೆ 16.2 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್​ಗಳ ಗುರಿ ಮುಟ್ಟುವ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 4 ವಿಕೆಟ್​ಗಳ ಗೆಲುವು ದಾಖಲಿಸಿತು. ಈ ಮೂಲಕ ಚೊಚ್ಚಲ ಸೌತ್ ಆಫ್ರಿಕಾ ಟಿ20 ಲೀಗ್​ನ ಚಾಂಪಿಯನ್​ ಪಟ್ಟವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಅಲಂಕರಿಸಿದೆ.

5 / 7
ಪ್ರಿಟೋರಿಯಾ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್) , ಕುಸಲ್ ಮೆಂಡಿಸ್ , ಥೀನಿಸ್ ಡಿ ಬ್ರುಯ್ನ್ , ರಿಲೀ ರೊಸ್ಸೌ , ಕಾಲಿನ್ ಇಂಗ್ರಾಮ್ , ಜೇಮ್ಸ್ ನೀಶಮ್ , ವೇಯ್ನ್ ಪಾರ್ನೆಲ್ (ನಾಯಕ) ಈಥನ್ ಬಾಷ್ , ಮಿಗೇಲ್ ಪ್ರಿಟೋರಿಯಸ್ , ಆದಿಲ್ ರಶೀದ್ , ಅನ್ರಿಕ್ ನೋಕಿಯಾ.

6 / 7
ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ಪ್ಲೇಯಿಂಗ್ ಇಲೆವೆನ್: ಆಡಮ್ ರೋಸಿಂಗ್ಟನ್ (ವಿಕೆಟ್ ಕೀಪರ್) , ಟೆಂಬಾ ಬವುಮಾ , ಜೋರ್ಡಾನ್ ಹರ್ಮನ್ , ಐಡೆನ್ ಮಾರ್ಕ್ರಾಮ್ (ನಾಯಕ) ಟ್ರಿಸ್ಟಾನ್ ಸ್ಟಬ್ಸ್ , ಜೋರ್ಡಾನ್ ಕಾಕ್ಸ್ , ಮಾರ್ಕೊ ಯಾನ್ಸೆನ್ , ಬ್ರೈಡನ್ ಕಾರ್ಸೆ , ಒಟ್ನಿಯೆಲ್ ಬಾರ್ಟ್‌ಮ್ಯಾನ್ , ರೋಲೋಫ್ ವ್ಯಾನ್ ಡೆರ್ ಮೆರ್ವೆ , ಸಿಸಂದಾ ಮಗಳಾ.

7 / 7
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ