AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಕಿಂಗ್ಸ್​ ತಂಡಕ್ಕೆ ಜಾನಿ ಬೈರ್​ಸ್ಟೋವ್ ಎಂಟ್ರಿ

SA20: 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಾಲೀಕತ್ವದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು 2024 ರಲ್ಲಿ ನಡೆದ ದ್ವಿತೀಯ ಸೀಸನ್​ನಲ್ಲೂ ಐಡೆನ್ ಮಾರ್ಕ್ರಾಮ್ ಮುಂದಾಳತ್ವದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿತ್ತು.

ಝಾಹಿರ್ ಯೂಸುಫ್
|

Updated on: Aug 03, 2024 | 11:08 AM

Share
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜಾನಿ ಬೈರ್​ಸ್ಟೋವ್ (Jonny Bairstow) ಮುಂಬರುವ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ (JSK) ಪರ ಕಣಕ್ಕಿಳಿಯಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮಾಲೀಕತ್ವದ JSK ತಂಡವು ವಿದೇಶಿ ಆಟಗಾರರ ಪಟ್ಟಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಬೈರ್​ಸ್ಟೋವ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಜೋಬರ್ಗ್ ಸೂಪರ್ ಕಿಂಗ್ಸ್ ತಂಡವನ್ನು ಸಿಎಸ್​ಕೆ ತಂಡದ ಮಾಜಿ ಆಟಗಾರ ಫಾಫ್ ಡುಪ್ಲೆಸಿಸ್ ಮುನ್ನಡೆಸಲಿದ್ದಾರೆ. ಐಪಿಎಲ್​ನಲ್ಲಿ ಆರ್​ಸಿಬಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿರುವ ಡುಪ್ಲೆಸಿಸ್ ಮೇಜರ್ ಲೀಗ್ ಕ್ರಿಕೆಟ್ (ಅಮೆರಿಕ) ಟೂರ್ನಿಯಲ್ಲಿ ಸಿಎಸ್​ಕೆ ಮಾಲೀಕತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ.

2 / 5
ಇನ್ನು ಫಾಫ್ ಮುಂದಾಳತ್ವದ ಈ ತಂಡದಲ್ಲಿ ವಿದೇಶಿ ಆಟಗಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ಆಲ್​ರೌಂಡರ್ ಮೊಯೀನ್ ಅಲಿ, ಶ್ರೀಲಂಕಾ ಸ್ಪಿನ್ನರ್ ಮಹೀಶ್ ತೀಕ್ಷಣ, ನ್ಯೂಝಿಲೆಂಡ್ ವೇಗಿ ನಾಂಡ್ರೆ ಬರ್ಗರ್, ನಮೀಬಿಯಾದ ಡೇವಿಡ್ ವೀಝ ಹಾಗೂ ಇಂಗ್ಲೆಂಡ್​ನ ಜಾನಿ ಬೈರ್​ಸ್ಟೋವ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ತಂಡದಲ್ಲಿ ಅನುಭವಿ ಆಟಗಾರ ಇಮ್ರಾನ್ ತಾಹಿರ್ ಕೂಡ ಇರುವುದು ವಿಶೇಷ.

3 / 5
ಜೋಬರ್ಗ್ ಸೂಪರ್ ಕಿಂಗ್ಸ್ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ಮೊಯೀನ್ ಅಲಿ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜೆರಾಲ್ಡ್ ಕೋಟ್ಝಿ, ಡೇವಿಡ್ ವೀಝ, ಲಿಯುಸ್ ಡು ಪ್ಲೂಯ್, ಲಿಝಾಡ್ ವಿಲಿಯಮ್ಸ್, ನಾಂಡ್ರೆ ಬರ್ಗರ್, ಡೊನೊವನ್ ಫೆರೇರಾ, ಸಿಬೊನೆಲೊ ಮಖನ್ಯಾ, ತಬ್ರೇಝ್  ಶಮ್ಸಿ, ಮಹೀಶ್ ತೀಕ್ಷಣ, ಇಮ್ರಾನ್ ತಾಹಿರ್.

4 / 5
ಸೌತ್ ಆಫ್ರಿಕಾ ಟಿ20 ಯಾವಾಗ ಶುರು?- ಜೋಬರ್ಗ್​ ಸೂಪರ್ ಕಿಂಗ್ಸ್, ಎಂಐ ಕೇಪ್​ಟೌನ್, ಸನ್​ರೈಸರ್ಸ್ ಈಸ್ಟರ್ನ್ ಕೇಪ್, ಪ್ರಿಟೊರಿಯಾ ಕ್ಯಾಪಿಟಲ್ಸ್, ಡರ್ಬನ್ ಸೂಪರ್ ಜೈಂಟ್ಸ್​, ಪಾರ್ಲ್ ರಾಯಲ್ಸ್​ ತಂಡಗಳನ್ನು ಒಳಗೊಂಡಿರುವ SA20 ಟೂರ್ನಿಯು ಮುಂದಿನ ವರ್ಷ ಜನವರಿ 9 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 8 ರಂದು ಜರುಗಲಿದೆ.

5 / 5
Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ

ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ

ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ

ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು

ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!