IPL 2021: ಹ್ಯಾಟ್ರಿಕ್ ಟ್ರೋಫಿಗೆ ಮುಂಬೈ ಇಂಡಿಯನ್ಸ್ ‘ಮಾಸ್ಟರ್ ಬ್ಲಾಸ್ಟರ್’ ಪ್ಲ್ಯಾನ್
Mumbai indians: 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.
Updated on: Sep 12, 2021 | 6:58 PM

ಇನ್ನು ಟಾಪ್-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್. ಮುಂಬೈ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್ ಅನ್ನು ಸಹ ಕರೆಸಿಕೊಂಡಿದೆ.

ಹೌದು, ಮುಂಬೈ ಇಂಡಿಯನ್ಸ್ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ 2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಇದಾಗ್ಯೂ ಕಳೆದ ಸೀಸನ್ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.
