AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫರ್ಹಾನ್ ಆರ್ಭಟಕ್ಕೆ ಅಭಿಷೇಕ್ ಶರ್ಮಾ ದಾಖಲೆ ಉಡೀಸ್..!

Sahibzada Farhan Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ 100 ಕ್ಕಿಂತ ಹೆಚ್ಚು ಸಿಕ್ಸ್ ಬಾರಿಸಿರುವುದು ಕೇವಲ 5 ಐದು ಬ್ಯಾಟರ್​​​ಗಳು ಮಾತ್ರ. ಈ ಸಾಧನೆ ಮಾಡಿದ ವಿಶ್ವದ ಮೊದಲ ದಾಂಡಿಗ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್. ಇದಾದ ಬಳಿಕ ಹೆನ್ರಿಕ್ ಕ್ಲಾಸೆನ್ ಹಾಗೂ ನಿಕೋಲಸ್ ಪೂರನ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಪಾಕಿಸ್ತಾನ್ ತಂಡದ ದಾಂಡಿಗ ಸಾಹಿಬ್​ಝಾದ ಫರ್ಹಾನ್ ಕೂಡ ಈ ವಿಶ್ವ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 24, 2025 | 9:55 AM

Share
ಟಿ20 ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ಬ್ಯಾಟರ್ ಸಾಹಿಬ್​​ಝಾದ ಫರ್ಹಾನ್ ಸಿಕ್ಸರ್​​ಗಳ ಸುರಿಮಳೆಗೈದಿದ್ದಾರೆ. ಈ ಸಿಕ್ಸರ್​​ ಸುರಿಮಳೆಯೊಂದಿಗೆ ಒಂದೇ ವರ್ಷದಲ್ಲಿ 100 ಸಿಕ್ಸ್ ಸಿಡಿಸಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಟಿ20 ಕ್ರಿಕೆಟ್​​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

1 / 6
ರಾವಲ್ಪಿಂಡಿಯಲ್ಲಿ ನಡೆದ ಶ್ರೀಲಂಕಾ ಹಾಗೂ ಝಿಂಬಾಬ್ವೆ ವಿರುದ್ಧದ ಪಂದ್ಯಗಳಲ್ಲಿ ಪಾಕ್ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ ಒಟ್ಟು 8 ಸಿಕ್ಸ್​​​ಗಳನ್ನು ಸಿಡಿಸಿದ್ದಾರೆ. ಈ ಎಂಟು ಸಿಕ್ಸರ್​​ಗಳೊಂದಿಗೆ ಸಾಹಿಬ್​ಝಾದ 2025 ರಲ್ಲಿ 100 ಸಿಕ್ಸರ್​​​ಗಳನ್ನು ಪೂರೈಸಿದ್ದಾರೆ.

2 / 6
ಇದರೊಂದಿಗೆ ಒಂದೇ ವರ್ಷದಲ್ಲಿ 100 ಸಿಕ್ಸ್ ಸಿಡಿಸಿದ ಏಷ್ಯಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಹಿಂದೆ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಬರೆದ ಭರ್ಜರಿ ದಾಖಲೆಯನ್ನು ಫರ್ಹಾನ್ ಅಳಿಸಿ ಹಾಕಿದ್ದಾರೆ.

3 / 6
ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷ ಅತ್ಯಧಿಕ ಸಿಕ್ಸ್ ಸಿಡಿಸಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು. 2024 ರಲ್ಲಿ 38 ಟಿ20 ಇನಿಂಗ್ಸ್ ಆಡಿದ್ದ ಅಭಿಷೇಕ್ ಶರ್ಮಾ ಬರೋಬ್ಬರಿ 87 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಒಂದೇ ವರ್ಷದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಈ ದಾಖಲೆಯನ್ನು ಸಾಹಿಬ್​ಝಾದ ಫರ್ಹಾನ್ ಅಳಿಸಿ ಹಾಕಿದ್ದಾರೆ. ಈ ವರ್ಷ 43 ಟಿ20 ಇನಿಂಗ್ಸ್ ಆಡಿರುವ ಸಾಹಿಬ್​ಝಾದ ಬರೋಬ್ಬರಿ 104 ಸಿಕ್ಸರ್​​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಅಷ್ಟೇ ಅಲ್ಲದೆ ಕ್ರಿಸ್ ಗೇಲ್ (135), ನಿಕೋಲಸ್ ಪೂರನ್ (170), ಕರಣ್​ಭೀರ್ ಸಿಂಗ್ (122), ಹೆನ್ರಿಕ್ ಕ್ಲಾಸೆನ್ (105) ಬಳಿಕ ಒಂದೇ ವರ್ಷದಲ್ಲಿ 100 ಸಿಕ್ಸ್​ ಸಿಡಿಸಿದ ವಿಶ್ವದ 5ನೇ ಬ್ಯಾಟರ್ ಹಾಗೂ ಏಷ್ಯಾದ ಮೊದಲ ದಾಂಡಿಗ ಎಂಬ ಭರ್ಜರಿ ದಾಖಲೆಯನ್ನು ಸಾಹಿಬ್​ಝಾದ ಫರ್ಹಾನ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?

ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್