AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

Sahibzada Farhan Records: ಟಿ20 ವಿಶ್ವಕಪ್​​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಬ್ಯಾಟರ್ ಸಾಹಿಬ್​ಝಾದ ಫರ್ಹಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಪಾಕ್ ಓಪನರ್ ಹೊಸ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 01, 2026 | 8:39 AM

Share
ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada Farhan) ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಗೈಯ್ಯುವ ಮೂಲಕ. ಈ ಸಿಕ್ಸರ್​ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ಕ್ಯಾಂಡಿಯ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 100 ರನ್​ ಚಚ್ಚಿದ್ದರು. ಈ ವೇಳೆ ಸಿಡಿಸಿದ 5 ಸಿಕ್ಸರ್​ಗಳೊಂದಿಗೆ ಟಿ20 ವಿಶ್ವಕಪ್​ನ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್​ನ ನಿಕೋಲಸ್ ಪೂರನ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪರ ಆರ್ಭಟಿಸಿದ್ದ ಪೂರನ್ ಒಟ್ಟು 17 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸಾಹಿಬ್​ಝಾದ ಫರ್ಹಾನ್ ಅಳಿಸಿ ಹಾಕಿದ್ದಾರೆ.

3 / 5
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್ ಆಡಿರುವ ಸಾಹಿಬ್​ಝಾದ ಫರ್ಹಾನ್ ಒಟ್ಟು 18 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಬಾರಿಸಿದ 100 ರನ್​ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ (319) ಹೆಸರಿನಲ್ಲಿತ್ತು. ಆದರೆ ಈ ಬಾರಿ 383 ರನ್​ ಕಲೆಹಾಕುವ ಮೂಲಕ ಸಾಹಿಬ್​ಝಾದ ಫರ್ಹಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ