- Kannada News Photo gallery Cricket photos Sahibzada Farhan Creates New World Record in T20 World Cup 2026
ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್
Sahibzada Farhan Records: ಟಿ20 ವಿಶ್ವಕಪ್ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಬ್ಯಾಟರ್ ಸಾಹಿಬ್ಝಾದ ಫರ್ಹಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಪಾಕ್ ಓಪನರ್ ಹೊಸ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.
Updated on: Mar 01, 2026 | 8:39 AM

ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್ಝಾದ ಫರ್ಹಾನ್ (Sahibzada Farhan) ಟಿ20 ವಿಶ್ವಕಪ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್ಗಳ ಸುರಿಮಳೆಗೈಯ್ಯುವ ಮೂಲಕ. ಈ ಸಿಕ್ಸರ್ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕ್ಯಾಂಡಿಯ ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್ಝಾದ ಫರ್ಹಾನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 100 ರನ್ ಚಚ್ಚಿದ್ದರು. ಈ ವೇಳೆ ಸಿಡಿಸಿದ 5 ಸಿಕ್ಸರ್ಗಳೊಂದಿಗೆ ಟಿ20 ವಿಶ್ವಕಪ್ನ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್ನ ನಿಕೋಲಸ್ ಪೂರನ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್ನಲ್ಲಿ ವಿಂಡೀಸ್ ಪರ ಆರ್ಭಟಿಸಿದ್ದ ಪೂರನ್ ಒಟ್ಟು 17 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸಾಹಿಬ್ಝಾದ ಫರ್ಹಾನ್ ಅಳಿಸಿ ಹಾಕಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 6 ಇನಿಂಗ್ಸ್ ಆಡಿರುವ ಸಾಹಿಬ್ಝಾದ ಫರ್ಹಾನ್ ಒಟ್ಟು 18 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬಾರಿಸಿದ 100 ರನ್ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ (319) ಹೆಸರಿನಲ್ಲಿತ್ತು. ಆದರೆ ಈ ಬಾರಿ 383 ರನ್ ಕಲೆಹಾಕುವ ಮೂಲಕ ಸಾಹಿಬ್ಝಾದ ಫರ್ಹಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




