AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!

ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎಂಬ ಮಾತಿದೆ. ಆದರೆ, ಕೆಲವೊಂದು ದಾಖಲೆಗಳು ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಅಷ್ಟು ಸುಲಭವಾಗಿ ಅಳಿಸಿಹೋಗದಂತೆ ಅಚ್ಚೊತ್ತಿಬಿಡುತ್ತವೆ! ಇದೀಗ ಅಂತಹದ್ದೇ ಒಂದು ಅದ್ಭುತ ಮೈಲಿಗಲ್ಲು ಟಿ20 ಕ್ರಿಕೆಟ್ ಅಖಾಡದಲ್ಲಿ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಪಾಕಿಸ್ತಾನ ತಂಡದ ನೂತನ ನಾಯಕ ಸಾಹಿಬ್‌ಝಾದ ಫರ್ಹಾನ್.

ಝಾಹಿರ್ ಯೂಸುಫ್
|

Updated on: Oct 15, 2026 | 3:08 PM

Share
ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಪಾಕಿಸ್ತಾನ್ ತಂಡದ ನಾಯಕ ಸಾಹಿಬ್​ಝಾದ ಫರ್ಹಾನ್ ಬ್ಯಾಟ್​ನಿಂದ. ಈ ಐತಿಹಾಸಿಕ ಸಾಧನೆಯೊಂದಿಗೆ, ಟಿ20 ಕ್ರಿಕೆಟ್‌ನಲ್ಲೇ ಇದುವರೆಗೆ ಯಾರೂ ಮಾಡದ ಅಪರೂಪದ ದಾಖಲೆಯೊಂದನ್ನು ಸಾಹಿಬ್​ಝಾದ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: Gettyimages)

1 / 5
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರೂ ಪಂದ್ಯಗಳಲ್ಲೂ ಸಾಹಿಬ್‌ಝಾದ ಫರ್ಹಾನ್ ಅರ್ಧಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದರ ಎಲ್ಲಾ ಪಂದ್ಯಗಳಲ್ಲೂ ಹಾಫ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ನಾಯಕನೆಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. (PC: Gettyimages)

2 / 5
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 89 ರನ್ ಬಾರಿಸಿ ಅಬ್ಬರಿಸಿದ್ದ ಸಾಹಿಬ್‌ಝಾದ ಫರ್ಹಾನ್, ದ್ವಿತೀಯ ಪಂದ್ಯದಲ್ಲೂ 73 ರನ್ ಸಿಡಿಸಿದ್ದರು. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಸಾಹಿಬ್‌ಜಾದಾ 76 ರನ್ ಗಳಿಸುವ ಮೂಲಕ ಈ ಅಪರೂಪದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

3 / 5
ಈ ಮೂರು ಭರ್ಜರಿ ಇನಿಂಗ್ಸ್​ಗಳೊಂದಿಗೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು. ಅಭಿಷೇಕ್ ಶರ್ಮಾ ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ 229 ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು. (PC: Gettyimages)

4 / 5
ಇದೀಗ ಸಾಹಿಬ್​ಝಾದ ಫರ್ಹಾನ್ ಮೂರು ಇನಿಂಗ್ಸ್​ಗಳ ಮೂಲಕ ಬರೋಬ್ಬರಿ 238 ರನ್​ ಗಳಿಸಿದ್ದಾರೆ. ಈ ಮೂಲಕ 3 ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಪಾಕ್ ತಂಡದ ನಾಯಕ ಸಾಹಿಬ್​ಝಾದ ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ

ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್

ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ

RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​

‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?

ದಸರಾ: ಪ್ರಶಾಂತ ಆನೆಯ ಆಯ್ಕೆ ಎಷ್ಟು ಸವಾಲಾಗಿತ್ತು? ವಿವರಿಸಿದ ಸಿಸಿಎಫ್

ಹಿಂದಿ ಸರಿಗಮಪದಲ್ಲಿ ಮಿಂಚು ಹರಿಸಿದ ಕನ್ನಡತಿ ಶಿವಾನಿ ಸ್ವಾಮಿ

ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ
ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ
₹90 ಲಕ್ಷ ಹೂವಿನ ಅಲಂಕಾರ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್!

ಅಂಕಿತಾ ಭಂಡಾರಿ ಕೊಲೆ, ಪೋಷಕರ ಪ್ರತಿಭಟನೆಗೆ ರಾಹುಲ್, ಪ್ರಿಯಾಂಕಾ ಸಾಥ್