
ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಪಾಕಿಸ್ತಾನ್ ತಂಡದ ನಾಯಕ ಸಾಹಿಬ್ಝಾದ ಫರ್ಹಾನ್ ಬ್ಯಾಟ್ನಿಂದ. ಈ ಐತಿಹಾಸಿಕ ಸಾಧನೆಯೊಂದಿಗೆ, ಟಿ20 ಕ್ರಿಕೆಟ್ನಲ್ಲೇ ಇದುವರೆಗೆ ಯಾರೂ ಮಾಡದ ಅಪರೂಪದ ದಾಖಲೆಯೊಂದನ್ನು ಸಾಹಿಬ್ಝಾದ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: Gettyimages)
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರೂ ಪಂದ್ಯಗಳಲ್ಲೂ ಸಾಹಿಬ್ಝಾದ ಫರ್ಹಾನ್ ಅರ್ಧಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದರ ಎಲ್ಲಾ ಪಂದ್ಯಗಳಲ್ಲೂ ಹಾಫ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ನಾಯಕನೆಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. (PC: Gettyimages)
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 89 ರನ್ ಬಾರಿಸಿ ಅಬ್ಬರಿಸಿದ್ದ ಸಾಹಿಬ್ಝಾದ ಫರ್ಹಾನ್, ದ್ವಿತೀಯ ಪಂದ್ಯದಲ್ಲೂ 73 ರನ್ ಸಿಡಿಸಿದ್ದರು. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಸಾಹಿಬ್ಜಾದಾ 76 ರನ್ ಗಳಿಸುವ ಮೂಲಕ ಈ ಅಪರೂಪದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)
ಈ ಮೂರು ಭರ್ಜರಿ ಇನಿಂಗ್ಸ್ಗಳೊಂದಿಗೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು. ಅಭಿಷೇಕ್ ಶರ್ಮಾ ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ 229 ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು. (PC: Gettyimages)
ಇದೀಗ ಸಾಹಿಬ್ಝಾದ ಫರ್ಹಾನ್ ಮೂರು ಇನಿಂಗ್ಸ್ಗಳ ಮೂಲಕ ಬರೋಬ್ಬರಿ 238 ರನ್ ಗಳಿಸಿದ್ದಾರೆ. ಈ ಮೂಲಕ 3 ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಪಾಕ್ ತಂಡದ ನಾಯಕ ಸಾಹಿಬ್ಝಾದ ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)