ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಸಾಹಿಬ್​ಝಾದ ಫರ್ಹಾನ್

Updated on: Apr 02, 2026 | 10:22 AM

Sahibzada Farhan: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ ಸಾಹಿಬ್​ಝಾದ ಫರ್ಹಾನ್ ಭರ್ಜರಿ ಶತಕ ಬಾರಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಹೈದರಾಬಾದ್ ಕಿಂಗ್ಸ್​ಮೆನ್ ತಂಡ ನೀಡಿದ 226 ರನ್​​ಗಳ ಗುರಿಯನ್ನು ಬೆನ್ನತ್ತಿ ಮುಲ್ತಾನ್ ಸುಲ್ತಾನ್ಸ್ ತಂಡ ಅಮೋಘ ಗೆಲುವು ದಾಖಲಿಸಿದೆ.

1 / 6
PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸಾಹಿಬ್​ಝಾದ ಫರ್ಹಾನ್ (Sahibzada Farhan) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸಾಹಿಬ್​ಝಾದ, ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

2 / 6
ಲಾಹೋರ್​ನಲ್ಲಿ ನಡೆದ ಪಿಎಸ್​ಎಲ್​ನ 8ನೇ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ಹಾಗೂ ಹೈದರಾಬಾದ್ ಕಿಂಗ್ಸ್​ಮೆನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​​ಗಳಲ್ಲಿ 225 ರನ್​ ಕಲೆಹಾಕಿದ್ದರು.

3 / 6
ಈ ಗುರಿ ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ 57 ಎಸೆತಗಳನ್ನು ಎದುರಿಸಿದ ಸಾಹಿಬ್​ಝಾದ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 106 ರನ್ ಬಾರಿಸಿದರು.

4 / 6
ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಸಾಹಿಬ್​ಝಾದ ಫರ್ಹಾನ್ 4ನೇ ಸ್ಥಾನಕ್ಕೇರಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿ ಒಟ್ಟು 9 ಸೆಂಚುರಿ ಸಿಡಿಸಿದ್ದಾರೆ.

5 / 6
ಟಿ20 ಕ್ರಿಕೆಟ್​ನಲ್ಲಿ 398 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಈವರೆಗೆ 9 ಶತಕಗಳನ್ನು ಸಿಡಿಸಿದ್ದಾರೆ. ಈ 9 ಶತಗಳಲ್ಲಿ ಎಂಟು ಸೆಂಚುರಿಗಳು ಐಪಿಎಲ್​ನಲ್ಲಿ ಮೂಡಿಬಂದರೆ, ಒಂದು ಶತಕವನ್ನು ಟೀಮ್ ಇಂಡಿಯಾ ಪರ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

6 / 6
ಇದೀಗ ಪಾಕಿಸ್ತಾನ್ ಬ್ಯಾಟರ್ ಸಾಹಿಬ್​ಝಾದ ಫರ್ಹಾನ್ 9ನೇ ಶತಕ ಬಾರಿಸಿದ್ದಾರೆ. ಈವರೆಗೆ 160 ಟಿ20 ಇನಿಂಗ್ಸ್ ಆಡಿರುವ ಸಾಹಿಬ್​ಝಾದ ಒಂಭತ್ತು ಶತಕಗಳೊಂದಿಗೆ ಟಿ20 ಸೆಂಚುರಿ ಸರದಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿಯ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ಸಾಹಿಬ್​ಝಾದ ಫರ್ಹಾನ್ ಯಶಸ್ವಿಯಾಗಿದ್ದಾರೆ.

Follow Us