T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ

Updated on: Feb 28, 2026 | 8:41 PM

T20 World Cup 2026: ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿ, ವಿರಾಟ್ ಕೊಹ್ಲಿ (2014ರ 319 ರನ್) ಮತ್ತು ಬಾಬರ್ ಆಜಂ (2021ರ 303 ರನ್) ದಾಖಲೆಗಳನ್ನು ಅಳಿಸಿಹಾಕಿದರು. ಈ ಟೂರ್ನಿಯಲ್ಲಿ ಫರ್ಹಾನ್ 370ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

1 / 5
ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ  ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು.

2 / 5
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ  ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ ಟೀಂ ಇಂಡಿಯಾದ ದಂತಕಥೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದರು.

3 / 5
ವಾಸ್ತವವಾಗಿ 2014 ರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 319 ರನ್ ಬಾರಿಸಿ ಈ ಪಟ್ಟಿಯಲ್ಲಿ ಇದುವರೆಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದರು. ಆದಾಗ್ಯೂ, ಲಂಕಾ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ಫರ್ಹಾನ್ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

4 / 5
2026 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಪರ ಬ್ಯಾಟಿಂಗ್​ನಲ್ಲಿ ಅಮೋಘ ಪ್ರದರ್ಶನ ಫರ್ಹಾನ್ ಇದುವರೆಗೆ ಆಡಿರುವ 6 ಇನ್ನಿಂಗ್ಸ್​ಗಳಲ್ಲಿ 78.25 ರ ಸರಾಸರಿಯಲ್ಲಿ 370 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಟೂರ್ನಮೆಂಟ್ ನಲ್ಲಿ ಅವರು ಒಂದು ಶತಕ ಮತ್ತು ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 5
ಫರ್ಹಾನ್ ಕೊಹ್ಲಿ ದಾಖಲೆಯನ್ನು ಮಾತ್ರವಲ್ಲದೆ, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಪಾಕಿಸ್ತಾನಿ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಬಾಬರ್ ಅಜಮ್ ಅವರ ದಾಖಲೆಯನ್ನೂ ಮುರಿದರು. 2021 ರ ಆವೃತ್ತಿಯಲ್ಲಿ ಬಾಬರ್ 303 ರನ್ ಗಳಿಸಿದ್ದರು. ಶ್ರೀಲಂಕಾ ವಿರುದ್ಧ 20 ರನ್‌ಗಳ ಮೈಲಿಗಲ್ಲು ದಾಟಿದ ತಕ್ಷಣ ಫರ್ಹಾನ್ ಈ ವಿಶೇಷ ಸಾಧನೆ ಮಾಡಿದರು.

Published On - 8:40 pm, Sat, 28 February 26

Follow Us