AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್..!

Sai Sudharsan injury: ಭಾರತ vs ಶ್ರೀಲಂಕಾ ಟೆಸ್ಟ್ ಸರಣಿಯಿಂದ ಯುವ ಬ್ಯಾಟರ್ ಸಾಯಿ ಸುದರ್ಶನ್ ಗಾಯದ ಕಾರಣದಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸುದರ್ಶನ್ ಅವರ ಅಲಭ್ಯತೆ ತಂಡದ ಬ್ಯಾಟಿಂಗ್ ಬಲವನ್ನು ಕುಂದಿಸುತ್ತದೆ. ಜಸ್ಪ್ರೀತ್ ಬುಮ್ರಾ ಈಗಾಗಲೇ ಹೊರಗುಳಿದಿದ್ದು, ಶುಭ್​ಮನ್ ಗಿಲ್ ಗಾಯದ ಚಿಂತೆ ತಂಡವನ್ನು ಕಾಡುತ್ತಿದೆ. ಸರಣಿ ಆರಂಭಕ್ಕೂ ಮುನ್ನ ತಂಡದ ಆತಂಕ ಹೆಚ್ಚಿಸಿದೆ.

ಪೃಥ್ವಿಶಂಕರ
|

Updated on: Aug 08, 2026 | 3:35 PM

Share
ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯವನ್ನು ಆಡುತ್ತಿರುವ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಯುವ ಬ್ಯಾಟರ್ ಸಾಯಿ ಸುದರ್ಶನ್ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದಿಂದ ಬಳಲುತ್ತಿದ್ದ ಸುದರ್ಶನ್ ಚೇತರಿಸಿಕೊಳ್ಳದ ಕಾರಣ ಅವರನ್ನು ಸರಣಿಯಿಂದ ಹೊರಗಿಡಲಾಗಿದೆ(PC-PTI).

1 / 5
ಶ್ರೀಲಂಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವ ಸಮಯದಲ್ಲಿ ಸಾಯಿ ಸುದರ್ಶನ್ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಸಾಯಿ ಸುದರ್ಶನ್ ತಂಡದಲ್ಲಿ ಆಡುವುದು ಅವರ ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ಅಂದೇ ಹೇಳಿತ್ತು. ಆದರೀಗ ಸರಿಯಾದ ಸಮಯಕ್ಕೆ ಸುದರ್ಶನ್ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರಿಗೆ ಚೇತರಿಕೆಗೆ ಮತ್ತಷ್ಟು ಸಮಯಾವಕಾಶ ನೀಡಲಾಗಿದೆ(PC-PTI).

2 / 5
ವಾಸ್ತವವಾಗಿ ಕಳೆದೆರಡು ದಿನಗಳ ಹಿಂದೆ ಸಾಯಿ ಸುದರ್ಶನ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು ಎನ್​ಸಿಎ ವೈದ್ಯಕೀಯ ತಂಡದಲ್ಲಿ ಕ್ಲೀಯರೆನ್ಸ್ ಸರ್ಟಿಫಿಕೆಟ್ ಕೂಡ ಪಡೆದಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೆ ಸುದರ್ಶನ್ ಆಗಸ್ಟ್ 9ರೊಳಗೆ ಶ್ರೀಲಂಕಾದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂತಲೂ ಹೇಳಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ(PC-PTI).

3 / 5
ಸಾಯಿ ಸುದರ್ಶನ್ ಈ ಸರಣಿಯಿಂದ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್‌ ಬಲವನ್ನು ಹೆಚ್ಚಿಸುತ್ತಿದ್ದರು. ಅಲ್ಲದೆ ಇತ್ತೀಚೆಗೆ ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿದ್ದ ಸಾಯಿ ಸುದರ್ಶನ್ ಆಡಿದ್ದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 166.00 ಸರಾಸರಿಯಲ್ಲಿ ಎರಡು ಶತಕಗಳ ಸಹಿತ 332 ರನ್ ಗಳಿಸಿದ್ದರು(PC-PTI).

4 / 5
ಹೀಗಾಗಿ ಅದ್ಭುತ ಫಾರ್ಮ್​ನಲ್ಲಿದ್ದ ಸುದರ್ಶನ್ ಸರಣಿಯಿಂದ ಹೊರಗುಳಿದಿರುವುದು ತಂಡವನ್ನು ಸಂಕಷ್ಟಕ್ಕೆ ತಳ್ಳಿದೆ. ಸಾಯಿ ಸುದರ್ಶನ್​ಗೂ ಮೊದಲು, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗಿದ್ದಾರೆ. ಹಾಗೆಯೇ ನಾಯಕ ಶುಭ್​ಮನ್ ಗಿಲ್ ಕೂಡ ಗಾಯಗೊಂಡಿರುವುದು ತಂಡಕ್ಕೆ ಕಳವಳಕಾರಿಯಾಗಿದೆ. ಆದಾಗ್ಯೂ ಗಿಲ್ ಮೊದಲ ಟೆಸ್ಟ್ ವೇಳೇಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ