AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Sudharsan: ಚೊಚ್ಚಲ ಪಂದ್ಯದಲ್ಲೇ ದಾಖಲೆ ಪಟ್ಟಿ ಸೇರಿದ ಸಾಯಿ ಸುದರ್ಸನ್

Sai Sudharsan Record: ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿರುವುದು ಕೇವಲ ಮೂವರು ಆರಂಭಿಕರು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ರಾಬಿನ್ ಉತ್ತಪ್ಪ ಎಂಬುದು ವಿಶೇಷ.

TV9 Web
| Edited By: |

Updated on:Dec 18, 2023 | 8:03 AM

Share
ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಟೀಮ್ ಇಂಡಿಯಾ ಎಡಗೈ ದಾಂಡಿಗ ಸಾಯಿ ಸುದರ್ಸನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಸನ್ 43 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 55 ರನ್ ಬಾರಿಸಿದ್ದರು. ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಗೆ ಸಾಯಿ ಹೆಸರು ಸೇರ್ಪಡೆಯಾಯಿತು.

2 / 7
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿರುವುದು ಕೇವಲ ಮೂವರು ಆರಂಭಿಕರು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ರಾಬಿನ್ ಉತ್ತಪ್ಪ ಎಂಬುದು ವಿಶೇಷ.

3 / 7
2006 ರಲ್ಲಿ ಇಂಗ್ಲೆಂಡ್​ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಕೊಡಗಿನ ಕುವರ ರಾಬಿನ್ ಉತ್ತಪ್ಪ 86 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ದಾಖಲೆ ಉತ್ತಪ್ಪ ಪಾಲಾಯಿತು.

4 / 7
ಇದಾದ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಭಾರತದ ಪರ ಚೊಚ್ಚಲ ಏಕದಿನ ಪಂದ್ಯದಲ್ಲೇ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದರು.

5 / 7
ಇನ್ನು ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಫೈಝ್ ಫಝಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಚೊಚ್ಚಲ ಪಂದ್ಯವಾಡಿದ್ದ ಫಝಲ್ 55 ರನ್​ಗಳ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಮೊದಲ ಏಕದಿನ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದರು.

6 / 7
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 55 ರನ್ ಬಾರಿಸುವ ಮೂಲಕ ಸಾಯಿ ಸುದರ್ಸನ್ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ.

7 / 7

Published On - 8:03 am, Mon, 18 December 23

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್

‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!