ಸೌತ್ ಆಫ್ರಿಕಾ ಪರ ಇನಿಂಗ್ಸ್ ಆರಂಭಿಸಿದ ಟೋನಿ ಝೋರ್ಝಿ (33) ಹಾಗೂ ರಿಕೆಲ್ಟನ್ (36) ಮೊದಲ ವಿಕೆಟ್ಗೆ 70 ರನ್ ಕಲೆಹಾಕಿ ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 86 ರನ್ ಸಿಡಿಸಿದರು. ಈ ಅರ್ಧಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.