ಸೈಮ್ ದಾಖಲೆಯ ಸೆಂಚುರಿ ಮುಂದೆ ಮಂಡಿಯೂರಿದ ಸೌತ್ ಆಫ್ರಿಕಾ

|

Updated on: Dec 18, 2024 | 10:46 AM

South Africa vs Pakistan: ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ನೀಡಿ 240 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೊನೆಯ ಓವರ್​ನಲ್ಲಿ ಗೆಲುವಿನ ಗುರಿ ಮುಟ್ಟುವ ಮೂಲಕ 3 ವಿಕೆಟ್​ಗಳ ಜಯ ಸಾಧಿಸಿದೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಪಾಕಿಸ್ತಾನ್ ತಂಡದ ಯುವ ಆರಂಭಿಕ ಬ್ಯಾಟರ್ ಸೈಮ್ ಅಯ್ಯೂಬ್. ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

2 / 5
ಸೌತ್ ಆಫ್ರಿಕಾ ಪರ ಇನಿಂಗ್ಸ್ ಆರಂಭಿಸಿದ ಟೋನಿ ಝೋರ್ಝಿ (33) ಹಾಗೂ ರಿಕೆಲ್ಟನ್ (36) ಮೊದಲ ವಿಕೆಟ್​ಗೆ 70 ರನ್ ಕಲೆಹಾಕಿ ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 86 ರನ್ ಸಿಡಿಸಿದರು. ಈ ಅರ್ಧಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು 50 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.

3 / 5
240 ರನ್​​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಬ್ಯಾಟರ್ ಅಬ್ದುಲ್ಲಾ ಶಫೀಕ್ (0) ಶೂನ್ಯಕ್ಕೆ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಕೇವಲ 23 ರನ್​​ಗಳಿಸಿ ಹೊರ ನಡೆದರು. ಇನ್ನು ನಾಯಕ ಮೊಹಮ್ಮದ್ ರಿಝ್ವಾನ್ 1 ರನ್​​ಗಳಿಸಿ ವಿಕೆಟ್ ಒಪ್ಪಿಸಿದರು.

4 / 5
ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಸೈಮ್ ಅಯ್ಯೂಬ್ ಅತ್ಯಾಕರ್ಷಕ ಹೊಡೆತಗಳೊಂದಿಗೆ ರನ್​​ಗಳಿಸುತ್ತಾ ಸಾಗಿದರು. ಈ ಮೂಲಕ 112 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಸೌತ್ ಆಫ್ರಿಕಾ ವಿರುದ್ಧ ಚೇಸಿಂಗ್​ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು 22 ವರ್ಷದ ಸೈಮ್ ಅಯ್ಯೂಬ್ ತಮ್ಮದಾಗಿಸಿಕೊಂಡರು.

5 / 5
ಇನ್ನು 119 ಎಸೆತಗಳನ್ನು ಎದುರಿಸಿದ ಸೈಮ್ ಅಯ್ಯೂಬ್ 3 ಸಿಕ್ಸ್ ಹಾಗೂ 10 ಫೋರ್​​ಗಳೊಂದಿಗೆ 109 ರನ್ ಬಾರಿಸಿ ಔಟಾದರು. ಈ ಹಂತದಲ್ಲಿ ಜವಾಬ್ದಾರಿಯುತ ಇನಿಂಗ್ಸ್ ಆಡಿದ ಸಲ್ಮಾನ್ ಅಘಾ 90 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ 49.3 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಪಾಕಿಸ್ತಾನ್ ತಂಡವು ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ 3 ವಿಕೆಟ್​ಗಳ ಜಯ ಸಾಧಿಸಿದೆ.

Published On - 7:53 am, Wed, 18 December 24