22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್

Saim Ayub Records: ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 109 ರನ್ ಬಾರಿಸಿ ಮಿಂಚಿದ್ದ ಸೈಮ್ ಅಯ್ಯೂಬ್, ಮೂರನೇ ಏಕದಿನ ಪಂದ್ಯದಲ್ಲಿ 101 ರನ್ ಸಿಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ತಂಡವು ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದರೊಂದಿಗೆ ಸೈಮ್ ಅಯ್ಯೂಬ್​ಗೆ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಕೂಡ ಒಲಿದಿದೆ.

ಝಾಹಿರ್ ಯೂಸುಫ್
|

Updated on:Dec 23, 2024 | 11:09 AM

ಹೆಸರು ಸೈಮ್ ಅಯ್ಯೂಬ್. ವಯಸ್ಸು ಕೇವಲ 22, ಆಡಿದ ಏಕದಿನ ಪಂದ್ಯಗಳ ಸಂಖ್ಯೆ 9. ಇದರ ನಡುವೆ 3 ಶತಕ ಹಾಗೂ 1 ಅರ್ಧಶತಕ ಬಾರಿಸಿದ್ದಾರೆ. 9 ಇನಿಂಗ್ಸ್​ಗಳಲ್ಲಿ 64.38ರ ಸರಾಸರಿಯಲ್ಲಿ ಈವರೆಗೆ 515 ರನ್​ ಕಲೆಹಾಕಿದ್ದಾರೆ. ಅದರಲ್ಲೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಭರ್ಜರಿ ಶತಕ ಸಿಡಿಸಿ ಸೈಮ್ ಅಯ್ಯೂಬ್ ಇದೀಗ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

1 / 7
ಸೌತ್ ಆಫ್ರಿಕಾ ವೇಗಿಗಳ ಮುಂದೆ ಸೆಟೆದು ನಿಂತ 22ರ ಹರೆಯದ ಸೈಮ್ 3 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 235 ರನ್ ಬಾರಿಸಿದರು. ಈ ಭರ್ಜರಿ ಪ್ರದರ್ಶನಕ್ಕೆ ಯುವ ದಾಂಡಿಗನಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ವಿಶೇಷ ಎಂದರೆ ಇದು ಏಕದಿನ ಕ್ರಿಕೆಟ್​ನಲ್ಲಿ ಸೈಮ್ ಅಯ್ಯೂಬ್ ಅವರ 2ನೇ ಸರಣಿ ಶ್ರೇಷ್ಠ ಪ್ರಶಸ್ತಿ.

2 / 7
ಇದಕ್ಕೂ ಮುನ್ನ ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ 77.50 ಸರಾಸರಿಯಲ್ಲಿ 155 ಬಾರಿಸಿದ್ದರು. ಅಲ್ಲದೆ ಬೌಲಿಂಗ್​​ನಲ್ಲೂ 3 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಸೈಮ್ ಅಯ್ಯೂಬ್ ಚೊಚ್ಚಲ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

3 / 7
ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಆಡಿದ 9 ಏಕದಿನ ಪಂದ್ಯಗಳಲ್ಲೇ 2 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಇದೇ ಪ್ರದರ್ಶನ ಮುಂದುವರೆಸಿದರೆ ಸೈಮ್ ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

4 / 7
ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 108 ಏಕದಿನ ಸರಣಿಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 15 ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ.

5 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ರನ್ ಮೆಷಿನ್ ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಪರ ಈವರೆಗೆ 72 ಏಕದಿನ ಸರಣಿಗಳನ್ನಾಡಿರುವ ಕಿಂಗ್ ಕೊಹ್ಲಿ ಒಟ್ಟು 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ.

6 / 7
ಆದರೀಗ ಕೇವಲ 3 ಏಕದಿನ ಸರಣಿಗಳನ್ನು ಆಡಿರುವ ಸೈಮ್ ಅಯ್ಯೂಬ್ 2 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಸಂಚಲನ ಸೃಷ್ಟಿಸಿದ್ದಾರೆ. ಅದು ಕೂಡ 22ನೇ ವಯಸ್ಸಿನಲ್ಲಿ. ಹೀಗಾಗಿಯೇ ಸೈಮ್ ಅಯ್ಯೂಬ್ ಇದೇ ಫಾರ್ಮ್ ಮುಂದುವರೆಸಿದರೆ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿರುವ ಅತ್ಯಧಿಕ ಸರಣಿ ಶ್ರೇಷ್ಠ ಪ್ರಶಸ್ತಿಗಳ ದಾಖಲೆಯನ್ನು ಮುರಿಯಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

7 / 7

Published On - 11:08 am, Mon, 23 December 24

Follow us
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್

ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು

Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ

ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ

ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್

ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು

ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್

ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು

ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?