AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

Sanjiv Goenka and Rishabh Pant: ಲಕ್ನೋನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಹೀನಾಯ ಸೋಲಿನ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಸುದ್ದಿಯಾಗಿದ್ದಾರೆ. ಅದು ಸಹ ಎಂದಿನಂತೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 02, 2026 | 7:03 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

1 / 5
ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್​​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​​ಗಳ ಜಯ ಸಾಧಿಸಿದೆ.

2 / 5
ಇತ್ತ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಕಳಪೆ ಪ್ರದರ್ಶನ ನೀಡಿ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿರುವುದಕ್ಕೆ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

3 / 5
ಪಂದ್ಯದ ನಂತರ ಸಂಜೀವ್ ಗೋಯೆಂಕಾ ಅವರು ರಿಷಭ್ ಪಂತ್ ಮತ್ತು ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರೊಂದಿಗೆ ಗಂಭೀರವಾಗಿ ಮಾತನಾಡುತ್ತಿರುವುದು ಕಂಡುಬಂದಿದ್ದು, ಈ ವೇಳೆ ಗೋಯೆಂಕಾ ಅವರು ಕೈಸನ್ನೆ ಮಾಡುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಪಂತ್ ಶಾಂತವಾಗಿ ಅವರಿಗೆ ಉತ್ತರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

4 / 5
ಅಂದಹಾಗೆ ಸಂಜೀವ್ ಗೋಯೆಂಕಾ ಹೀಗೆ ತಂಡದ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2024ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಹೀನಾಯವಾಗಿ ಸೋತಾಗ ಮೈದಾನದಲ್ಲೇ ಅಂದಿನ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ದೊಡ್ಡ ವಿವಾದವಾಗಿತ್ತು. ಇದೀಗ ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವ ಗೋಯೆಂಕಾ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

5 / 5
Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?

ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್

ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ