ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ತಿಂಗಳುಗಳು ಕಾಲ ಮಾತ್ರ ಉಳಿದಿವೆ. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿ ಕೂಡ ಸಿದ್ಧವಾಗಿದೆ. ಅದರಂತೆ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದೆ. ಆದರೆ ಈ ಮಹಾ ಕ್ರಿಕೆಟ್ ಕದನಕ್ಕಾಗಿ ಇನ್ನೂ ಕೂಡ ಟೀಮ್ ಇಂಡಿಯಾ ರೂಪುಗೊಂಡಿಲ್ಲ. ಇದಕ್ಕೆ ಸಾಕ್ಷಿಯೇ ಇತ್ತೀಚೆಗಿನ ಆಸ್ಟ್ರೇಲಿಯಾ ವಿರುದ್ಧದ ಸರಣಿ ಸೋಲು.