
T20 World Cup 2026: ಟಿ20 ವಿಶ್ವಕಪ್ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ ಅಜೇಯ 97 ರನ್ ಬಾರಿಸಿದ್ದರು. ಈ 97 ರನ್ಗಳೊಂದಿಗೆ ಟಿ20 ವಿಶ್ವಕಪ್ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ಸ್ಕೋರ್ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿ ಭಾರತ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದರು.

ಹಾಗೆಯೇ 2022 ರಲ್ಲಿ ಮೆಲ್ಬೋರ್ನ್ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್ ಸಿಡಿಸಿ ಅಮೋಘ ಗೆಲುವು ತಂದು ಕೊಟ್ಟಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಆದರೀಗ ಈ ದಾಖಲೆಯನ್ನು ಸಂಜು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಆರ್ಭಟಿಸುವ ಮೂಲಕ ಸಂಜು ಸ್ಯಾಮ್ಸನ್ ಅಜೇಯ 97 ರನ್ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ಸ್ಕೋರ್ಗಳಿಸಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.