IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

Updated on: Apr 12, 2026 | 7:34 AM

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ 23 ರನ್​ಗಳ ಜಯ ಸಾಧಿಸಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದ ಮೇಲೆ ಅಲ್ಲಿ ದಾಖಲೆಗಳಿಗೆ ಕೊರತೆಯಿಲ್ಲ. ದಾಖಲೆಗಳ ನಡುವೆ ಸಂಜು ಸ್ಯಾಮ್ಸನ್ (Sanju Samson) ಅಪರೂಪದ ರೆಕಾರ್ಡ್​ವೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಾಲ್ಕು ವಿಭಿನ್ನ ಸೀಸನ್‌ಗಳಲ್ಲಿ 'ಸೀಸನ್‌ನ ಮೊದಲ ಶತಕ' ಸಿಡಿಸುವ ಮೂಲಕ ಎಂಬುದು ವಿಶೇಷ.

2 / 5
ಸಾಮಾನ್ಯವಾಗಿ ಒಂದು ಸೀಸನ್‌ನಲ್ಲಿ ಶತಕ ಸಿಡಿಸುವುದೇ ದೊಡ್ಡ ಸಾಧನೆ. ಆದರೆ ಸಂಜು ಸ್ಯಾಮ್ಸನ್ ಅವರು ಲೀಗ್ ಆರಂಭದ ಹಂತದಲ್ಲೇ ಅಬ್ಬರಿಸಿ, ಆ ಸೀಸನ್‌ನ ಚೊಚ್ಚಲ ಶತಕವನ್ನು ತಮ್ಮದಾಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಈ ಹವ್ಯಾಸದೊಂದಿಗೆ ಇದೀಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

3 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ ನಾಲ್ಕು ಸೀಸನ್​ಗಳಲ್ಲಿ ಸಂಜು ಸ್ಯಾಮ್ಸನ್ ಮೊದಲ ಶತಕ ಬಾರಿಸಿದ್ದಾರೆ. 2017 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಪರ ಕಣಕ್ಕಿಳಿದಿದ್ದ ಸಂಜು  ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ 102 ರನ್ ಗಳಿಸುವ ಮೂಲಕ ಆ ಸೀಸನ್‌ನ ಮೊದಲ ಶತಕ ದಾಖಲಿಸಿದ್ದರು.  2019 ಹಾಗೂ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟ್ ಬೀಸಿದ್ದ ಸಂಜು ಸ್ಯಾಮ್ಸನ್  ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್  ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಸೀಸನ್​ನ ಮೊದಲ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

4 / 5
ಇದೀಗ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಚೊಚ್ಚಲ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ನಾಲ್ಕು ಸೀಸನ್​​ಗಳಲ್ಲಿ ಮೊದಲ ಶತಕ ಬಾರಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಇದಕ್ಕೂ ಮುನ್ನ  ಬ್ರೆಂಡನ್ ಮೆಕಲಮ್ (2008 ಮತ್ತು 2015) ಎರಡು ಸೀಸನ್​​ಗಳಲ್ಲಿ ಮೊದಲ ಸೆಂಚುರಿ ಸಿಡಿಸಿ ಮಿಂಚಿದ್ದರು. ಆದರೆ ಸಂಜು ಸ್ಯಾಮ್ಸನ್ ನಾಲ್ಕು ಸೀಸನ್​​ಗಳಲ್ಲಿ ಮೊದಲ ಶತಕ ಬಾರಿಸುವ ಮೂಲಕ ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.

Follow Us