AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು

Sanju Samson Reaches 5000 IPL Runs: ಸಂಜು ಸ್ಯಾಮ್ಸನ್ ಐಪಿಎಲ್‌ನಲ್ಲಿ 5000 ರನ್ ಪೂರೈಸಿದ ವೇಗದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ 11 ರನ್ ಗಳಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು. ಕೇವಲ 3555 ಎಸೆತಗಳಲ್ಲಿ 5000 ರನ್ ಗಳಿಸಿ, ಸುರೇಶ್ ರೈನಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿವೇಗದ ಆಟಗಾರರಾಗಿದ್ದಾರೆ.

ಪೃಥ್ವಿಶಂಕರ
|

Updated on: Apr 26, 2026 | 6:16 PM

Share
ರಾಜಸ್ಥಾನ್ ರಾಯಲ್ಸ್ ತಂಡ ತೊರೆದು ಸಿಎಸ್​ಕೆ ತಂಡವನ್ನು ಕೂಡಿಕೊಂಡಿರುವ ಸಂಜು ಸ್ಯಾಮ್ಸನ್ 2026 ರ ಐಪಿಎಲ್‌ನಲ್ಲಿ ಇದುವರೆಗೆ 2 ಭರ್ಜರಿ ಶತಕಗಳನ್ನು ಬಾರಿಸಿದ್ದಾರೆ. ಅದರಲ್ಲೂ ಕೇವಲ 4 ಪಂದ್ಯಗಳ ಅಂತರದಲ್ಲಿ ಎರಡು ಶತಕಗಳನ್ನು ಬಾರಿಸಿರುವ ಸಂಜು ಸಿಎಸ್​ಕೆ ಪರ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಸಂಜು ಮತ್ತೊಂದು ದಾಖಲೆ ಬರೆದಿದ್ದಾರೆ.

1 / 5
ಸಿಎಸ್​​ಕೆ ಪರ ಎರಡು ಶತಕಗಳ ಇನ್ನಿಂಗ್ಸ್ ಆಡಿರುವ ಸಂಜುಗೆ ಗುಜರಾತ್ ಟೈಟಾನ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಸಂಜು ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದರು. ಆದಾಗ್ಯೂ ಸಂಜು ಈ 11 ರನ್​ಗಳ ಮೂಲಕ ಐಪಿಎಲ್‌ನಲ್ಲಿ 5,000 ರನ್‌ಗಳನ್ನು ಪೂರೈಸಿದರು. ಹಾಗೆಯೇ ಅತಿ ವೇಗವಾಗಿ 5000 ರನ್ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 5
ಐಪಿಎಲ್​ನಲ್ಲಿ ಇದುವರೆಗೆ 185 ಪಂದ್ಯಗಳಲ್ಲಿ 180 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ಸಂಜು 31.69 ರ ಸರಾಸರಿಯಲ್ಲಿ 5000 ರನ್​ಗಳ ಗಡಿ ದಾಟಿದ್ದಾರೆ. ಈ ರನ್ ಪೂರೈಸಲು ಸಂಜು ಕೇವಲ 3,555 ಎಸೆತಗಳನ್ನು ತೆಗೆದುಕೊಂಡಿರುವುದು ಅವರನ್ನು ಅತಿ ವೇಗವಾಗಿ 5000 ರನ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಗೆ ಕಾರಣವಾಗಿದೆ.

3 / 5
ಈ ಮೂಲಕ ಸಂಜು ಸ್ಯಾಮ್ಸನ್ ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರ ದಾಖಲೆಯನ್ನು ಅವರು ಮುರಿದಿದ್ದಾರೆ. ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ ಐಪಿಎಲ್‌ನಲ್ಲಿ 5000 ರನ್​ಗಳನ್ನು  ಪೂರೈಸಲು 3620 ಎಸೆತಗಳನ್ನು ತೆಗೆದುಕೊಂಡಿದ್ದರು. ಆದರೆ ಸಂಜು 65 ಎಸೆತಗಳನ್ನು ಕಡಿಮೆ ತೆಗೆದುಕೊಳ್ಳುವ ಮೂಲಕ 5000 ರನ್ ಪೂರೈಸಿ ಸುರೇಶ್ ರೈನಾ ಅವರನ್ನು ಹಿಂದಿಕ್ಕಿದ್ದಾರೆ.

4 / 5
ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.

5 / 5
Follow Us