Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್

IND vs ZIM: ಹರಾರೆಯ ಸ್ಪೋರ್ಟ್ಸ್​ ಕ್ಲಬ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 161 ರನ್​ಗಳಿಗೆ ಆಲೌಟ್ ಆಗಿತ್ತು.

Aug 21, 2022 | 1:24 PM
TV9kannada Web Team

| Edited By: Zahir PY

Aug 21, 2022 | 1:24 PM

ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್‌ಗಳಿಂದ ಜಿಂಬಾಬ್ವೆಯನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನು ಸರಣಿಯ ಕೊನೆಯ ಪಂದ್ಯ ಸೋಮವಾರ ನಡೆಯಲಿದೆ.

1 / 5
ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನ ನೀಡಿದ್ದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್ಸನ್ ಬಿರುಸಿನ 43 ರನ್​ ಬಾರಿಸಿ ಅಬ್ಬರಿಸಿದರು. ಇದಕ್ಕಾಗಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು. ಅಷ್ಟೇ ಅಲ್ಲದೆ ವಿಶೇಷ ದಾಖಲೆಯೊಂದನ್ನೂ ಕೂಡ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

2 / 5
ಜಿಂಬಾಬ್ವೆಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ 39 ಎಸೆತಗಳಲ್ಲಿ 3 ಫೋರ್ ಹಾಗೂ 4 ಸಿಕ್ಸ್​ನೊಂದಿಗೆ ಅಜೇಯ 43 ರನ್ ಸಂಜು ಸ್ಯಾಮ್ಸನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

3 / 5
ಈ ಹಿಂದೆ ಜಿಂಬಾಬ್ವೆ ವಿರುದ್ದ ಧೋನಿ, ರಾಹುಲ್ ದ್ರಾವಿಡ್ ಸೇರಿದಂತೆ ಹಲವು ವಿಕೆಟ್ ಕೀಪರ್​ಗಳು ಮಿಂಚಿದ್ದರೂ, ಜಿಂಬಾಬ್ವೆ ನೆಲದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದಿರಲಿಲ್ಲ. ಇದೀಗ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

4 / 5
ಹರಾರೆಯ ಸ್ಪೋರ್ಟ್ಸ್​ ಕ್ಲಬ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 161 ರನ್​ಗಳಿಗೆ ಆಲೌಟ್ ಆಗಿತ್ತು. 162 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ 5 ವಿಕೆಟ್​ ಕಳೆದುಕೊಂಡು 25.4 ಓವರ್​ಗಳಲ್ಲಿ 167 ರನ್​ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು.

5 / 5

Follow us on

Most Read Stories

Click on your DTH Provider to Add TV9 Kannada