ಸೊನ್ನೆಯಿಂದ ಸೆಂಚುರಿ: ಹೀಗೊಂದು ದಾಖಲೆ ಬರೆದ ಸಂಜು ಸ್ಯಾಮ್ಸನ್

Sanju Samson Records: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ 2 ಭರ್ಜರಿ ಶತಕ ಸಿಡಿಸಿದರೆ, ಮತ್ತೆರಡು ಇನಿಂಗ್ಸ್​ಗಳಲ್ಲಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅಪರೂಪದ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Nov 16, 2024 | 11:30 AM

ಬ್ಯಾಕ್ ಟು ಬ್ಯಾಕ್ ಸೆಂಚುರಿ... ಬ್ಯಾಕ್ ಟು ಬ್ಯಾಕ್ ಸೊನ್ನೆ... ಸಂಜು ಸ್ಯಾಮ್ಸನ್ ಸತತ ಎರಡು ಶತಕಗಳನ್ನು ಬಾರಿಸಿದ ಬಳಿಕ ಸತತ ಎರಡು ಇನಿಂಗ್ಸ್​ಗಳಲ್ಲಿ ಸೊನ್ನೆ ಸುತ್ತಿದ್ದರು. ಅತ್ತ ಬ್ಯಾಕ್ ಟು ಬ್ಯಾಕ್ ಸೆಂಚುರಿಗಳೊಂದಿಗೆ ದಾಖಲೆ ಬರೆದ ಸ್ಯಾಮ್ಸನ್​ ಸೊನ್ನೆ ಸುತ್ತಿ ಅನಗತ್ಯದ ರೆಕಾರ್ಡ್​ಗೂ ಕೊರೊಳೊಡ್ಡಿದ್ದರು.

1 / 5
ಆದರೀಗ ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಮತ್ತೊಂದು ಸೆಂಚುರಿ ಸಿಡಿಸುವ ಮೂಲಕ ಸಂಜು ಸ್ಯಾಮ್ಸನ್ ಈ ವರ್ಷ ಅಪರೂಪದ ಹಾಗೂ ಅನಗತ್ಯದ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಒಂದೇ ವರ್ಷ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ಸಂಜು ಸ್ಯಾಮ್ಸನ್ ಪಾಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 111 ರನ್ ಬಾರಿಸಿದ್ದ ಸ್ಯಾಮ್ಸನ್, ಸೌತ್ ಆಫ್ರಿಕಾ ವಿರುದ್ಧ 107 ಮತ್ತು 109 ರನ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಒಂದೇ ವರ್ಷ 3 ಟಿ20 ಶತಕ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

3 / 5
ಇನ್ನು ಸೌತ್ ಆಫ್ರಿಕಾ ವಿರುದ್ಧ 2ನೇ ಮತ್ತು 3ನೇ ಟಿ20 ಪಂದ್ಯಗಳಲ್ಲಿ ಸೊನ್ನೆ ಸುತ್ತುವ ಮೂಲಕ ಒಂದೇ ವರ್ಷದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಸೊನ್ನೆಗೆ ಔಟಾದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ವರ್ಷ ಸ್ಯಾಮ್ಸನ್ ಒಟ್ಟು 5 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

4 / 5
ಅಂದರೆ ಒಂದೆಡೆ ಮೂರು ಸೆಂಚುರಿಗಳೊಂದಿಗೆ ಒಂದೇ ವರ್ಷ ಅತ್ಯಧಿಕ ಶತಕ ಸಿಡಿಸಿದ ಭರ್ಜರಿ ದಾಖಲೆ ಬರೆದಿರುವ ಸಂಜು ಸ್ಯಾಮ್ಸನ್, ಮತ್ತೊಂದೆಡೆ ಸೊನ್ನೆ ಸುತ್ತುವ ಮೂಲಕ ಒಂದೇ ವರ್ಷ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಅನಗತ್ಯದ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಈ ಮೂಲಕ ಒಂದೇ ವರ್ಷ ಅತ್ಯಂತ ಕಳಪೆ ಹಾಗೂ ಭರ್ಜರಿ ದಾಖಲೆಗಳನ್ನು ಸಂಜು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿರುವುದು ವಿಶೇಷ.

5 / 5
Follow us
ಹಗಲೆಲ್ಲ ಬಸನಗೌಡ ಯತ್ನಾಳ್ ವಿಷಯದಲ್ಲಿ ಮಾತಾಡುವುದು ಇಷ್ಟವಿಲ್ಲ: ವಿಜಯೇಂದ್ರ

ನಿತೀಶ್ ರಿವರ್ಸ್ ರ್ಯಾಂಪ್ ಶಾಟ್ ಸಿಕ್ಸರ್​ಗೆ ಬೆಚ್ಚಿದ ಆಸೀಸ್

ಯತ್ನಾಳ್ ಲಿಂಗಾಯತರ ಕ್ಷಮಾಪಣೆ ಕೇಳಿ ಗೌರವ ಉಳಿಸಿಕೊಳ್ಳಲಿ: ಸ್ವಾಮೀಜಿ

ಆಕಾಶದಲ್ಲಿ ಹಾರಾಡಿದ ಸರ್ಕಾರಿ ಶಾಲೆ ಮಕ್ಕಳು: ವಿಮಾನದಲ್ಲಿ ಪ್ರವಾಸ

ಆನೇಕಲ್: ಗಂಗೊಂಡಹಳ್ಳಿಯಲ್ಲಿ ಜಮೀನಿಗೆ ನುಗ್ಗಿದ 8 ಕಾಡಾನೆಗಳ ಹಿಂಡು

ಮಾತಾಡಿದರೆ ಯತ್ನಾಳ್ ಸರಿಹೋಗುತ್ತಾರೆ, ಸಮಸ್ಯೆಯೇನೂ ಇಲ್ಲ: ಯಡಿಯೂರಪ್ಪ

ಅಂಬೇಡ್ಕರ್ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವೆಂದು ಆಚರಣೆ

ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲಾಗದು: ಪ್ರಲ್ಹಾದ್ ಜೋಶಿ

ಬಣ ಬಡಿದಾಟ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ: ಅನ್ನದಾನಿ, ಶಾಸಕ

ನಿತ್ಯ ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ವಿಡಿಯೋ ನೋಡಿ