ಮಿಂಚಿನ ಶತಕದ ಬೆನ್ನಲ್ಲೇ ಕಂಚಿನ ಡಕ್: ಕೆಟ್ಟ ದಾಖಲೆ ಬರೆದ ಸಂಜು ಸ್ಯಾಮ್ಸನ್

| Updated By: ಝಾಹಿರ್ ಯೂಸುಫ್

Updated on: Nov 11, 2024 | 7:25 AM

Sanju Samson Record: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 107 ರನ್ ಬಾರಿಸಿ ಸಂಜು ಸ್ಯಾಮ್ಸನ್ ಅಬ್ಬರಿಸಿದ್ದರು. ಆದರೆ ದ್ವಿತೀಯ ಪಂದ್ಯದಲ್ಲಿ ಖಾತೆ ತೆರೆಯಲು ವಿಫಲರಾಗಿದ್ದಾರೆ. ಇದರೊಂದಿಗೆ ಸಂಜು ಸ್ಯಾಮ್ಸನ್ ಹೆಸರಿಗೆ ಅನಗತ್ಯ ದಾಖಲೆಯೊಂದು ಸೇರ್ಪಡೆಯಾಗಿದೆ.

1 / 5
ಡರ್ಬನ್‌‌‌ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಸಂಜು ಸ್ಯಾಮ್ಸನ್ ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ್ದಾರೆ. ಗೆಬಹಾದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು (0) ಮೂರು ಎಸೆತಗಳನ್ನು ಎದುರಿಸಿ ಕ್ಲೀನ್ ಬೌಲ್ಡ್ ಆದರು. ಈ ಬ್ರೌನ್ಝ್ ಡಕ್​ನೊಂದಿಗೆ ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

2 / 5
ಅಂದರೆ ಟಿ20 ಇತಿಹಾಸದಲ್ಲಿ ಭಾರತದ ಪರ ಒಂದು ವರ್ಷದೊಳಗೆ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದು ಸಂಜು ಸ್ಯಾಮ್ಸನ್ ಪಾಲಾಗಿದೆ. ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಭಾರತದ ಮೂವರು ಬ್ಯಾಟ್ಸ್​ಮನ್​ಗಳ ಹೆಸರಿನಲ್ಲಿತ್ತು.

3 / 5
ಯೂಸುಫ್ ಪಠಾಣ್ (2009), ರೋಹಿತ್ (2018, 2022) ಹಾಗೂ ವಿರಾಟ್ ಕೊಹ್ಲಿ (2024) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಈ ಕಳಪೆ ದಾಖಲೆಯನ್ನು ಸಂಜು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
2024ರಲ್ಲಿ ಸಂಜು ಸ್ಯಾಮ್ಸನ್ ಒಟ್ಟು 4 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಸ್ಯಾಮ್ಸನ್ ಮೈಮೇಲೆ ಎಳೆದುಕೊಂಡಿದ್ದಾರೆ.

5 / 5
ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮರು ಪಂದ್ಯದಲ್ಲೇ ಶೂನ್ಯಕ್ಕೆ ಔಟಾದ ನಾಲ್ಕನೇ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರುತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ ಹಾಗೂ ಅಭಿಷೇಕ್ ಶರ್ಮಾ  ಸೆಂಚುರಿ ಸಿಡಿಸಿದ ಬಳಿಕ ಸೊನ್ನೆ ಸುತ್ತಿದ್ದರು. ಇದೀಗ ಈ ಅನಗತ್ಯ ದಾಖಲೆ ಪಟ್ಟಿಯಲ್ಲೂ ಸ್ಯಾಮ್ಸನ್ ಹೆಸರು ಸೇರ್ಪಡೆಯಾಗಿದೆ.