Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಸ್ಯಾಮ್ಸನ್​​ ಸುಂಟರಗಾಳಿಗೆ ಹಳೆಯ ದಾಖಲೆಗಳು ಧೂಳೀಪಟ

India vs Bangladesh T20I: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದ ಗೆಲುವಿನ ರೂವಾರಿಗಳಲ್ಲಿ ಸಂಜು ಸ್ಯಾಮ್ಸನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್​ನಲ್ಲಿ ಅಮೋಘ ಶತಕ ಬಾರಿಸುವ ಮೂಲಕ ಸ್ಯಾಮ್ಸನ್ ಭಾರತ ತಂಡವು ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾಗಿದ್ದರು.

ಝಾಹಿರ್ ಯೂಸುಫ್
|

Updated on: Oct 13, 2024 | 8:20 AM

ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಸಂಜು ಸ್ಯಾಮ್ಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 7
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಸ್ಯಾಮ್ಸನ್ ಕೊನೆಯವರೆಗೂ ಅಬ್ಬರ ಮುಂದುವರೆಸಿದ್ದು ವಿಶೇಷವಾಗಿತ್ತು. ಅಲ್ಲದೆ ಕೇವಲ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 111 ರನ್​ ಚಚ್ಚುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

2 / 7
ಅತೀ ವೇಗದ ಹಾಫ್ ಸೆಂಚುರಿ: ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು ಸಂಜು ಸ್ಯಾಮ್ಸನ್ ತೆಗೆದುಕೊಂಡಿದ್ದು ಕೇವಲ 22 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಅತೀ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು.

3 / 7
ವಿಕೆಟ್ ಕೀಪರ್ ಶತಕ: ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಪೂರೈಸುವುದರೊಂದಿಗೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸೆಂಚುರಿ ಬಾರಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

4 / 7
ಅತೀ ವೇಗದ ಶತಕ: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೂ ಸಂಜು ಸ್ಯಾಮನ್ಸ್ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ. ಇನ್ನು 35 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 / 7
ಸ್ಪೋಟಕ ಶತಕ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಸಂಜು ಸ್ಯಾಮ್ಸನ್ ಪಾಲಾಗಿದೆ. ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಸ್ಯಾಮ್ಸನ್ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 7
5 ಸಿಕ್ಸ್​: ಯುವರಾಜ್ ಸಿಂಗ್ (36 ರನ್ಸ್) ಬಳಿಕ ಟೀಮ್ ಇಂಡಿಯಾ ಪರ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ರಿಷಾದ್ ಹೊಸೈನ್ ಅವರ ಒಂದೇ ಓವರ್​ನಲ್ಲಿ ಸ್ಯಾಮ್ಸನ್ 5 ಸಿಕ್ಸ್​ಗಳೊಂದಿಗೆ ಒಟ್ಟು 30 ರನ್​ ಚಚ್ಚಿ ಈ ಸಾಧನೆ ಮಾಡಿದ್ದಾರೆ.

7 / 7
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ