ಸಂಜು ಸ್ಯಾಮ್ಸನ್ ಸುಂಟರಗಾಳಿಗೆ ಹಳೆಯ ದಾಖಲೆಗಳು ಧೂಳೀಪಟ
India vs Bangladesh T20I: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದ ಗೆಲುವಿನ ರೂವಾರಿಗಳಲ್ಲಿ ಸಂಜು ಸ್ಯಾಮ್ಸನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್ನಲ್ಲಿ ಅಮೋಘ ಶತಕ ಬಾರಿಸುವ ಮೂಲಕ ಸ್ಯಾಮ್ಸನ್ ಭಾರತ ತಂಡವು ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾಗಿದ್ದರು.
1 / 7
ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಸಂಜು ಸ್ಯಾಮ್ಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.
2 / 7
ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಸ್ಯಾಮ್ಸನ್ ಕೊನೆಯವರೆಗೂ ಅಬ್ಬರ ಮುಂದುವರೆಸಿದ್ದು ವಿಶೇಷವಾಗಿತ್ತು. ಅಲ್ಲದೆ ಕೇವಲ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 111 ರನ್ ಚಚ್ಚುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...
3 / 7
ಅತೀ ವೇಗದ ಹಾಫ್ ಸೆಂಚುರಿ: ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು ಸಂಜು ಸ್ಯಾಮ್ಸನ್ ತೆಗೆದುಕೊಂಡಿದ್ದು ಕೇವಲ 22 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಬಾಂಗ್ಲಾದೇಶ್ ವಿರುದ್ಧ ಅತೀ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು.
4 / 7
ವಿಕೆಟ್ ಕೀಪರ್ ಶತಕ: ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಪೂರೈಸುವುದರೊಂದಿಗೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸೆಂಚುರಿ ಬಾರಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.
5 / 7
ಅತೀ ವೇಗದ ಶತಕ: ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೂ ಸಂಜು ಸ್ಯಾಮನ್ಸ್ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ. ಇನ್ನು 35 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
6 / 7
ಸ್ಪೋಟಕ ಶತಕ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂಬ ದಾಖಲೆ ಕೂಡ ಸಂಜು ಸ್ಯಾಮ್ಸನ್ ಪಾಲಾಗಿದೆ. ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಸ್ಯಾಮ್ಸನ್ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
7 / 7
5 ಸಿಕ್ಸ್: ಯುವರಾಜ್ ಸಿಂಗ್ (36 ರನ್ಸ್) ಬಳಿಕ ಟೀಮ್ ಇಂಡಿಯಾ ಪರ ಒಂದೇ ಓವರ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್ಮನ್ ಎಂಬ ಹಿರಿಮೆಗೂ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ರಿಷಾದ್ ಹೊಸೈನ್ ಅವರ ಒಂದೇ ಓವರ್ನಲ್ಲಿ ಸ್ಯಾಮ್ಸನ್ 5 ಸಿಕ್ಸ್ಗಳೊಂದಿಗೆ ಒಟ್ಟು 30 ರನ್ ಚಚ್ಚಿ ಈ ಸಾಧನೆ ಮಾಡಿದ್ದಾರೆ.