‘ಯಾರು ಏನು ಹೇಳುತ್ತಾರೆ ಎಂಬ ಚಿಂತೆ ನನಗಿಲ್ಲ’; ಟೀಕೆಗಳಿಗೆ ಬ್ಯಾಟ್‌ನಲ್ಲೇ ಉತ್ತರ ನೀಡಿದ ಸಂಜು

Updated on: Oct 22, 2026 | 10:04 PM

ಸಂಜು ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ T20 ಪಂದ್ಯದಲ್ಲಿ 33 ಎಸೆತಗಳಲ್ಲಿ 67 ರನ್ ಗಳಿಸಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದರು. ವಿಕೆಟ್ ಕೀಪರ್ ಆಗಿ T20I ನಲ್ಲಿ 200+ ಸ್ಟ್ರೈಕ್ ರೇಟ್‌ನೊಂದಿಗೆ ಅತಿ ಹೆಚ್ಚು ಬಾರಿ 50+ ರನ್ ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದರು. ಸಾಮಾಜಿಕ ಮಾಧ್ಯಮ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ, ತಮ್ಮ ಪ್ರಕ್ರಿಯೆ ಮತ್ತು ಆಟದ ಮೇಲೆ ಗಮನ ಕೇಂದ್ರೀಕರಿಸುವುದಾಗಿ ಸಂಜು ಹೇಳಿದ್ದಾರೆ.

1 / 6
ಸಂಜು ಸ್ಯಾಮ್ಸನ್ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು, ಟೀಂ ಇಂಡಿಯಾದ ದಾಖಲೆಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೇವಲ 33 ಎಸೆತಗಳಲ್ಲಿ 67 ರನ್ ಸಿಡಿಸಿ ಭಾರತಕ್ಕೆ 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ನೆರವಾದರು. ಈ ಅಮೋಘ ಪ್ರದರ್ಶನದೊಂದಿಗೆ ಸಂಜು ತಮ್ಮ ಹೆಸರಿಗೆ ಮತ್ತೊಂದು ವಿಶ್ವ ದಾಖಲೆಯನ್ನೂ ಸೇರಿಸಿಕೊಂಡಿದ್ದಾರೆ(PC-PTI).

ಸಂಜು ಸ್ಯಾಮ್ಸನ್ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು, ಟೀಂ ಇಂಡಿಯಾದ ದಾಖಲೆಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೇವಲ 33 ಎಸೆತಗಳಲ್ಲಿ 67 ರನ್ ಸಿಡಿಸಿ ಭಾರತಕ್ಕೆ 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ನೆರವಾದರು. ಈ ಅಮೋಘ ಪ್ರದರ್ಶನದೊಂದಿಗೆ ಸಂಜು ತಮ್ಮ ಹೆಸರಿಗೆ ಮತ್ತೊಂದು ವಿಶ್ವ ದಾಖಲೆಯನ್ನೂ ಸೇರಿಸಿಕೊಂಡಿದ್ದಾರೆ(PC-PTI).

2 / 6

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ಸಂಜು ಈ ಸಾಧನೆಯನ್ನು ಏಳು ಬಾರಿ ಮಾಡಿದ್ದಾರೆ. ಇಂಗ್ಲೆಂಡ್‌ನ ಜೋಸ್ ಬಟ್ಲರ್ ಆರು ಬಾರಿ ಈ ಸಾಧನೆ ಮಾಡಿದ್ದು, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ನಾಲ್ಕು ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

3 / 6

ಇನ್ನು ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ವಿಕೆಟ್ ಕೀಪಿಂಗ್ ಮಾಡುವುದರಿಂದ ಪಿಚ್‌ನ ಸ್ವಭಾವವನ್ನು ಅರ್ಥಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು. ವಿಕೆಟ್ ಕೀಪಿಂಗ್ ಮಾಡುವಾಗ ಈ ಪಿಚ್‌ನಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕು ಎಂಬುದರ ಬಗ್ಗೆ ಯೋಚಿಸುತ್ತೇನೆ. ಆದರೆ ನಾನು ಬ್ಯಾಟಿಂಗ್‌ಗೆ ಬಂದಾಗ ಪರಿಸ್ಥಿತಿ ಸಂಪೂರ್ಣ ಬದಲಾಗಿತ್ತು(PC-PTI).

4 / 6

ಮೊದಲ ಇನ್ನಿಂಗ್ಸ್‌ನಲ್ಲಿ ಚೆಂಡು ಸ್ವಲ್ಪ ನಿಧಾನವಾಗಿ ಬರುತ್ತಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿಯಿಂದಾಗಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರಲಾರಂಭಿಸಿತು. ನಾನು ಬ್ಯಾಟಿಂಗ್ ಅನ್ನು ಸಂಪೂರ್ಣವಾಗಿ ಆನಂದಿಸಿದೆ. ಪಿಚ್‌ನ ಪರಿಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದ್ದೇ ತಮ್ಮ ಯಶಸ್ಸಿಗೆ ಪ್ರಮುಖ ಕಾರಣ ಎಂದರು(PC-PTI).

5 / 6

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ವ್ಯಕ್ತವಾಗುವ ಟೀಕೆಗಳ ಬಗ್ಗೆ ಮಾತನಾಡಿದ ಸಂಜು, ‘ಜನರು ಏನು ಹೇಳುತ್ತಾರೆ ಎಂಬುದರ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಭಾರತಕ್ಕಾಗಿ ಆಡುವುದು ಸುಲಭವಲ್ಲ. ಸಾಕಷ್ಟು ಚರ್ಚೆಗಳು ನಡೆಯುತ್ತವೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಅಭಿಪ್ರಾಯ ಹೊಂದಿರುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಏನು ಹೇಳುತ್ತಾರೆ ಎಂಬುದನ್ನು ನಾನು ಗಮನಿಸುವುದಿಲ್ಲ(PC-PTI).

6 / 6

ನಾನು ನನ್ನ ಕೆಲಸವನ್ನು ನಂಬುತ್ತೇನೆ, ಅಭ್ಯಾಸಕ್ಕೆ ಗೌರವ ನೀಡುತ್ತೇನೆ ಮತ್ತು ಕ್ರಿಕೆಟ್ ಆಡುವುದರ ಮೇಲೆ ಗಮನ ಹರಿಸುತ್ತೇನೆ. ಯಾರನ್ನಾದರೂ ತಪ್ಪು ಎಂದು ಸಾಬೀತುಪಡಿಸುವ ಉದ್ದೇಶದಿಂದ ನಾನು ಆಡುವುದಿಲ್ಲ ಎಂದಿದ್ದಾರೆ. ಅಲ್ಲದೆ ಮೈದಾನದಲ್ಲಿ ಬ್ಯಾಟ್ ಮೂಲಕ ಉತ್ತರ ನೀಡಿರುವ ಸಂಜು ಭಾರತ ತಂಡದ ಪರ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಸೂಚನೆ ನೀಡಿದ್ದಾರೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us