- Kannada News Photo gallery Cricket photos IPL 2026: Sanju Samson's 101* Powers CSK Past MI, Sets Multiple Records
MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್‌ಕೆ ಬ್ಯಾಟರ್ ಸಂಜು ಸ್ಯಾಮ್ಸನ್
Sanju Samson's IPL 2026 Century: ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಿಎಸ್‌ಕೆ ಗೆಲುವಿಗೆ ಸಂಜು ಸ್ಯಾಮ್ಸನ್ ಅಜೇಯ 101 ರನ್ ಗಳಿಸಿದರು. ಇದು ಸಿಎಸ್‌ಕೆ ಪರ ಎಂಐ ವಿರುದ್ಧ ಮೊದಲ ಶತಕ. ಸ್ಯಾಮ್ಸನ್ ಒಂದೇ ಐಪಿಎಲ್ ಆವೃತ್ತಿಯಲ್ಲಿ ಎರಡು ಶತಕಗಳನ್ನು ಗಳಿಸಿದ ಎರಡನೇ ಸಿಎಸ್‌ಕೆ ಆಟಗಾರರಾದರು. ಅಲ್ಲದೆ, ಟಿ20 ಕ್ರಿಕೆಟ್‌ನಲ್ಲಿ ಎಂಟು ಶತಕ ಗಳಿಸಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು.
Updated on: Apr 24, 2026 | 2:50 PM

ಐಪಿಎಲ್ 2026 ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ನಲ್ಲಿ ತನ್ನ ಮೂರನೇ ಗೆಲುವು ದಾಖಲಿಸಿತು. ಸಿಎಸ್‌ಕೆ ತಂಡದ ಈ ಗೆಲುವಿನಲ್ಲಿ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಸಿಡಿಸಿದ ಸ್ಮರಣೀಯ ಶತಕ. ತಮ್ಮ ಇನ್ನಿಂಗ್ಸ್‌ನಲ್ಲಿ 54 ಎಸೆತಗಳನ್ನು ಎದುರಿಸಿದ ಅಜೇಯ 101 ರನ್ ಬಾರಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 6 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಅವರು ಪ್ರಮುಖ ದಾಖಲೆಯನ್ನು ನಿರ್ಮಿಸಿದರು.

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ.

ಇದು ಐಪಿಎಲ್ 2026 ರಲ್ಲಿ ಸಂಜು ಸ್ಯಾಮ್ಸನ್ ಅವರ ಎರಡನೇ ಶತಕವಾಗಿದೆ. ಇದರೊಂದಿಗೆ, ಒಂದೇ ಆವೃತ್ತಿಯಲ್ಲಿ ಎರಡು ಶತಕಗಳನ್ನು ಬಾರಿಸಿದ ಎರಡನೇ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಶೇನ್ ವ್ಯಾಟ್ಸನ್ 2018 ರಲ್ಲಿ ಅತ್ಯಧಿಕ ಶತಕ ಗಳಿಸಿದ್ದರು.

ಸಂಜು ಸ್ಯಾಮ್ಸನ್ ಈಗ ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸಿಎಸ್‌ಕೆ ಪರ ತಲಾ ಎರಡು ಶತಕಗಳನ್ನು ಗಳಿಸಿದ ರುತುರಾಜ್ ಗಾಯಕ್ವಾಡ್, ಮುರಳಿ ವಿಜಯ್ ಮತ್ತು ಶೇನ್ ವ್ಯಾಟ್ಸನ್ ಅವರೊಂದಿಗೆ ಇದೀಗ ಸಂಜು ಸ್ಯಾಮ್ಸನ್ ಕೂಡ ಸೇರಿಕೊಂಡಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಇದುವರೆಗೆ ಎಂಟು ಶತಕಗಳನ್ನು ಬಾರಿಸಿದ್ದು, ಈ ಮೂಲಕ ಅತಿ ಹೆಚ್ಚು ಶತಕ ಬಾರಿಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೋಹಿತ್ ಶರ್ಮಾ ಕೂಡ ಎಂಟು ಶತಕಗಳನ್ನು ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ ಮತ್ತು ಅಭಿಷೇಕ್ ಶರ್ಮಾ ತಲಾ ಒಂಬತ್ತು ಶತಕಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದಾರೆ.




