- Kannada News Photo gallery Cricket photos Sarfaraz, Jurel, Dayal set to be released from India squad
ಟೀಮ್ ಇಂಡಿಯಾದಿಂದ ಮೂವರು ಆಟಗಾರರು ರಿಲೀಸ್
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಪಂದ್ಯದ ನಡುವೆಯೇ ಈ ಬಾರಿಯ ಇರಾನಿ ಕಪ್ ಮ್ಯಾಚ್ ಕೂಡ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಕ್ಕಾಗಿ ಇದೀಗ ಭಾರತ ಟೆಸ್ಟ್ ತಂಡದಿಂದ ಮೂವರನ್ನು ರಿಲೀಸ್ ಮಾಡಲಾಗುತ್ತಿದೆ.
Updated on: Sep 25, 2024 | 10:09 AM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಝ್ ಖಾನ್, ಧ್ರುವ್ ಜುರೇಲ್ ಹಾಗೂ ಯಶ್ ದಯಾಳ್ ಅವರನ್ನು ಭಾರತ ತಂಡದಿಂದ ಹೊರಬರಲಿದ್ದಾರೆ. ಈ ಮೂವರು ಆಟಗಾರರು ಮುಂಬರುವ ಇರಾನಿ ಕಪ್ ಪಂದ್ಯಕ್ಕೆ ಆಯ್ಕೆಯಾಗಿದ್ದು, ಹೀಗಾಗಿ ಇವರನ್ನು ಟೀಮ್ ಇಂಡಿಯಾದಿಂದ ರಿಲೀಸ್ ಮಾಡಲಾಗುತ್ತಿದೆ.

ಸರ್ಫರಾಝ್ ಖಾನ್ ಇರಾನಿ ಕಪ್ಗಾಗಿ ಆಯ್ಕೆ ಮಾಡಲಾದ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಧ್ರುವ್ ಜುರೇಲ್ ಹಾಗೂ ಯಶ್ ದಯಾಳ್ ಶೇಷ ಭಾರತ ತಂಡದ ಭಾಗವಾಗಿದ್ದಾರೆ. ಹಾಗಾಗಿ ಅಕ್ಟೋಬರ್ 1 ರಿಂದ ಶುರುವಾಗಲಿರುವ ಇರಾನಿ ಕಪ್ನಲ್ಲಿ ಈ ಮೂವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇತ್ತ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. ಅಲ್ಲದೆ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಹೀಗಾಗಿಯೇ ಸರ್ಫರಾಝ್, ಯಶ್ ದಯಾಳ್ ಹಾಗೂ ಧ್ರುವ್ ಜುರೇಲ್ ಅವರನ್ನು ಇರಾನಿ ಕಪ್ಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಅತ್ತ ಇರಾನಿ ಕಪ್ ಪಂದ್ಯ ಶುರುವಾಗುವುದು ಅಕ್ಟೋಬರ್ 1 ರಿಂದ. ಒಂದು ವೇಳೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಕಾಣಿಸಿಕೊಂಡರೆ, ಈ ಆಟಗಾರರಿಗೆ ಇರಾನಿ ಕಪ್ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸೆಪ್ಟೆಂಬರ್ ಅಂತ್ಯದೊಳಗೆ ಈ ಮೂವರು ಇರಾನಿ ಕಪ್ ತಂಡಗಳನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಮುಂಬೈ ತಂಡ: ಅಜಿಂಕ್ಯ ರಹಾನೆ, ಪೃಥ್ವಿ ಶಾ , ಆಯುಷ್ ಮ್ಹಾತ್ರೆ, ಮುಶೀರ್ ಖಾನ್, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಸೂರ್ಯಾಂಶ್ ಶೆಡ್ಗೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಸಿದ್ದಾಂತ್ ಅದ್ಧತ್ರಾವ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್, ಮೊಹಿತ್ ಅವಸ್ತಿ, ಜುನೆದ್ ಖಾನ್, ರಾಯಿಸ್ಟನ್ ಡಯಾಸ್, ಸರ್ಫರಾಝ್ ಖಾನ್*.

ಶೇಷ ಭಾರತ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮಾನವ್ ಸುತಾರ್, ಸರನ್ಶ್ ಜೈನ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್, ರಿಕಿ ಭುಯಿ, ಶಾಶ್ವತ್ ರಾವತ್, ಖಲೀಲ್ ಅಹ್ಮದ್, ರಾಹುಲ್ ಚಹರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್)*, ಯಶ್ ದಯಾಳ್*.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್*, ಧ್ರುವ್ ಜುರೆಲ್* (ವಿಕೆಟ್ ಕೀಪರ್), ಸರ್ಫರಾಝ್ ಖಾನ್*.
