IND vs ENG: ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಕಣಕ್ಕಿಳಿಯುವುದು ಬಹುತೇಕ ಖಚಿತ

Edited By:

Updated on: Feb 13, 2024 | 7:35 AM

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ.

1 / 7
ರಾಜ್​ಕೋಟ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಸೌರಾಷ್ಟ್ರ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಈ ಸರಣಿಯಿಂದ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ.

ರಾಜ್​ಕೋಟ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಸೌರಾಷ್ಟ್ರ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಈ ಸರಣಿಯಿಂದ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ.

2 / 7

ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಂತೆ ಇಲ್ಲಿ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸರ್ಫರಾಝ್ ಖಾನ್​ ಭಾರತ ತಂಡದ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

3 / 7

ಮತ್ತೊಂದೆಡೆ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ವಿಫಲರಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಸ್ ಭರತ್ ಬದಲಿಗೆ ಧ್ರುವ್ ಜುರೇಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಲಿದೆ ತಿಳಿದು ಬಂದಿದೆ. ಇನ್ನು 2ನೇ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ರಜತ್ ಪಾಟಿದಾರ್ ಮೂರನೇ ಪಂದ್ಯದಲ್ಲೂ ಮುಂದುವರೆಯಲಿದ್ದಾರೆ.

4 / 7

ಇತ್ತ ಸರ್ಫರಾಝ್ ಖಾನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕರೆ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಏಕೆಂದರೆ ಈ ಹಿಂದೆ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರೆ, ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಹೀಗಾಗಿ ಈ ಕ್ರಮಾಂಕಗಳಲ್ಲೇ ಸರ್ಫರಾಝ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

5 / 7

ಇನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಧ್ರುವ್ ಜುರೇಲ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೆಎಸ್ ಭರತ್ ಇದೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅದೇ ಕ್ರಮಾಂಕದಲ್ಲಿ ಧ್ರುವ್ ಜುರೇಲ್ ಚೊಚ್ಚಲ ಪಂದ್ಯವನ್ನಾಡಬಹುದು.

6 / 7

ಅದರಂತೆ ಫೆಬ್ರವರಿ 15 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯುವ ದಾಂಡಿಗರಾದ ಸರ್ಫರಾಝ್ ಹಾಗೂ ಧ್ರುವ್ ಜುರೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗೆ ಸಿಗುವ ಅವಕಾಶದಲ್ಲಿ ಯಾರು ಮಿಂಚಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

7 / 7

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

Loading...
Unable to load recommendations.
Follow Us