- Kannada News Photo gallery Cricket photos Sarfaraz Khan Dhruv Jurel have been handed BCCI Central contract
Sarfaraz Khan – Dhruv Jurel: ಸರ್ಫರಾಝ್-ಧ್ರುವ್ ಜುರೇಲ್ಗೆ ಬಿಗ್ ಗಿಫ್ಟ್ ನೀಡಿದ ಬಿಸಿಸಿಐ
Sarfaraz Khan - Dhruv Jurel: ಬಿಸಿಸಿಐ ಕೇಂದ್ರೀಯ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಪಡೆಯಲು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೂರು ಪಂದ್ಯಗಳನ್ನಾಡಿರಬೇಕು. ಅದರಂತೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ಅವರನ್ನು ಬಿಸಿಸಿಐ ಸೆಂಟ್ರಲ್ ಕಾಂಟ್ರಾಕ್ಟ್ಗೆ ಪರಿಗಣಿಸಿದೆ.
Updated on: Mar 19, 2024 | 6:31 AM

ಟೀಮ್ ಇಂಡಿಯಾದ ಯುವ ಬ್ಯಾಟರ್ಗಳಾದ ಸರ್ಫರಾಝ್ ಖಾನ್ (Sarfaraz Khan) ಮತ್ತು ಧ್ರುವ್ ಜುರೇಲ್ (Dhruv Jurel) ಅವರನ್ನು ಬಿಸಿಸಿಐ ಕೇಂದ್ರೀಯ ಒಪ್ಪಂದಕ್ಕೆ ಪರಿಗಣಿಸಿದೆ. ಅದರಂತೆ ಇಬ್ಬರು ಆಟಗಾರರು ಗ್ರೇಡ್-ಸಿ ಒಪ್ಪಂದ ಪಟ್ಟಿಗೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಬಿಸಿಸಿಐ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಒಪ್ಪಂದ ಪಟ್ಟಿಯನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಒಟ್ಟು 30 ಆಟಗಾರರಿಗೆ ಸ್ಥಾನ ನೀಡಲಾಗಿತ್ತು. ಇದಾಗ್ಯೂ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ಹೆಸರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಇಬ್ಬರನ್ನು ಬಿಸಿಸಿಐ ಗ್ರೇಡ್ ಸಿ ವಾರ್ಷಿಕ ಒಪ್ಪಂದದ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಅದರಂತೆ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ವಾರ್ಷಿಕ 1 ಕೋಟಿ ರೂ. ಪಡೆಯಲಿದ್ದಾರೆ. ಬಿಸಿಸಿಐ ಕೇಂದ್ರ ಒಪ್ಪಂದ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಗ್ರೇಡ್ A+ (ವಾರ್ಷಿಕ 7 ಕೋಟಿ ರೂ.): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

ಗ್ರೇಡ್ A (ವಾರ್ಷಿಕ 5 ಕೋಟಿ ರೂ.): ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ.

ಗ್ರೇಡ್ B (ವಾರ್ಷಿಕ 3 ಕೋಟಿ ರೂ.): ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್.

ಗ್ರೇಡ್ C (ವಾರ್ಷಿಕ 1 ಕೋಟಿ ರೂ.): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್.




