ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಸರ್ಫರಾಝ್ ಖಾನ್ (Sarfaraz Khan) ಇದೀಗ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸರ್ಫರಾಝ್ 62 ರನ್ ಬಾರಿಸಿ ಮಿಂಚಿದ್ದರು.
ಇದೀಗ ದ್ವಿತೀಯ ಇನಿಂಗ್ಸ್ನಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯುವ ದಾಂಡಿಗ 65 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಬಾರಿಸಿದ ವಿಶೇಷ ಸಾಧನೆ ಮಾಡಿದ್ದಾರೆ.
ಈ ಅರ್ಧಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಮೊದಲ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ 50+ ಸ್ಕೋರ್ಗಳಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ದಿಲಾವರ್ ಹುಸೇನ್, ಸುನಿಲ್ ಗವಾಸ್ಕರ್ ಹಾಗೂ ಶ್ರೇಯಸ್ ಅಯ್ಯರ್ ಈ ಸಾಧನೆ ಮಾಡಿದ್ದರು.
ಇದೀಗ ಚೊಚ್ಚಲ ಮ್ಯಾಚ್ನಲ್ಲೇ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಸರ್ಫರಾಝ್ ಖಾನ್ ಕೂಡ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲಿ ಯುವ ದಾಂಡಿಗ ತನ್ನ ಆಗಮನವನ್ನು ವಿಶ್ವಕ್ಕೆ ಸಾರಿದ್ದಾರೆ.
ಇನ್ನು ಈ ಪಂದ್ಯದಲ್ಲಿ 72 ಎಸೆತಗಳನ್ನು ಎದುರಿಸಿದ ಸರ್ಫರಾಝ್ ಖಾನ್ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 68 ರನ್ ಬಾರಿಸಿದರು. ಈ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಒಟ್ಟು 130 ರನ್ ಕಲೆಹಾಕಿದರು.
IND vs ENG 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 319 ರನ್ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ 126 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (214) ಅವರ ಅಜೇಯ ದ್ವಿಶತಕ, ಸರ್ಫರಾಝ್ ಖಾನ್ (68) ಹಾಗೂ ಶುಭ್ಮನ್ ಗಿಲ್ (91) ಅವರ ಅರ್ಧಶತಕದ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 430 ರನ್ ಕಲೆಹಾಕಿದ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಇಂಗ್ಲೆಂಡ್ಗೆ 557 ರನ್ಗಳ ಗುರಿ ನೀಡಿದೆ.
Published On - 1:18 pm, Sun, 18 February 24