Sarfaraz Khan: ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ದಾಖಲೆ ಬರೆದ ಸರ್ಫರಾಝ್ ಖಾನ್

| Updated By: ಝಾಹಿರ್ ಯೂಸುಫ್

Updated on: Feb 18, 2024 | 2:24 PM

Sarfaraz Khan: ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ 50+ ಸ್ಕೋರ್​ಗಳಿಸಿದ ವಿಶೇಷ ಸಾಧಕರ ಪಟ್ಟಿಗೆ ಸರ್ಫರಾಝ್ ಕೂಡ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ ಖಾನ್ 62 ರನ್​ ಗಳಿಸಿದ್ದರು.

1 / 6
ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಸರ್ಫರಾಝ್ ಖಾನ್ (Sarfaraz Khan) ಇದೀಗ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ 62 ರನ್ ಬಾರಿಸಿ ಮಿಂಚಿದ್ದರು.

2 / 6
ಇದೀಗ ದ್ವಿತೀಯ ಇನಿಂಗ್ಸ್​ನಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯುವ ದಾಂಡಿಗ 65 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಬಾರಿಸಿದ ವಿಶೇಷ ಸಾಧನೆ ಮಾಡಿದ್ದಾರೆ.

3 / 6
ಈ ಅರ್ಧಶತಕಗಳೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಮೊದಲ ಪಂದ್ಯದ ಎರಡೂ ಇನಿಂಗ್ಸ್​ಗಳಲ್ಲಿ 50+ ಸ್ಕೋರ್​ಗಳಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ದಿಲಾವರ್ ಹುಸೇನ್, ಸುನಿಲ್ ಗವಾಸ್ಕರ್ ಹಾಗೂ ಶ್ರೇಯಸ್ ಅಯ್ಯರ್ ಈ ಸಾಧನೆ ಮಾಡಿದ್ದರು.

4 / 6
ಇದೀಗ ಚೊಚ್ಚಲ ಮ್ಯಾಚ್​ನಲ್ಲೇ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಸರ್ಫರಾಝ್ ಖಾನ್ ಕೂಡ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲಿ ಯುವ ದಾಂಡಿಗ ತನ್ನ ಆಗಮನವನ್ನು ವಿಶ್ವಕ್ಕೆ ಸಾರಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 72 ಎಸೆತಗಳನ್ನು ಎದುರಿಸಿದ ಸರ್ಫರಾಝ್ ಖಾನ್ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದರು. ಈ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಒಟ್ಟು 130 ರನ್​ ಕಲೆಹಾಕಿದರು.

6 / 6
IND vs ENG 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 319 ರನ್​ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ 126 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (214) ಅವರ ಅಜೇಯ ದ್ವಿಶತಕ, ಸರ್ಫರಾಝ್ ಖಾನ್ (68) ಹಾಗೂ ಶುಭ್​ಮನ್ ಗಿಲ್ (91) ಅವರ ಅರ್ಧಶತಕದ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 430 ರನ್​ ಕಲೆಹಾಕಿದ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಇಂಗ್ಲೆಂಡ್​ಗೆ 557 ರನ್​ಗಳ ಗುರಿ ನೀಡಿದೆ.

Published On - 1:18 pm, Sun, 18 February 24