Sarfaraz Khan: ಟೀಮ್ ಇಂಡಿಯಾದಲ್ಲಿ ಸಿಕ್ಕಿಲ್ಲ ಚಾನ್ಸ್​: ಮತ್ತೊಂದು ಶತಕ ಸಿಡಿಸಿದ ಸರ್ಫರಾಝ್

| Updated By: ಝಾಹಿರ್ ಯೂಸುಫ್

Updated on: Jan 17, 2023 | 5:05 PM

Sarfaraz Khan Century: ದೆಹಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಕೇವಲ 66 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

1 / 7
ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಯುವ ಬ್ಯಾಟರ್ ಸರ್ಫರಾಝ್ ಖಾನ್ ಬ್ಯಾಟಿಂಗ್ ಆರ್ಭಟ ಮುಂದುವರೆದಿದ್ದಾರೆ. ಈ ಸೀಸನ್​ನಲ್ಲಿ 2 ಶತಕ ಬಾರಿಸಿದ್ದ ಸರ್ಫರಾಝ್ ಇದೀಗ ಮತ್ತೊಂದು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಆದರೆ ಈ ಬಾರಿಯ ಶತಕ ಹೊಸ ಚರ್ಚೆಯನ್ನು ಹುಟ್ಟುಹಾಕಿರುವುದು ವಿಶೇಷ.

2 / 7
ಏಕೆಂದರೆ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಆದರೆ ರಣಜಿ ಕ್ರಿಕೆಟ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಸರ್ಫರಾಝ್ ಖಾನ್​ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಇದರ ಬೆನ್ನಲ್ಲೇ ಅನೇಕರು ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಖುದ್ದು ಸರ್ಫರಾಝ್ ಖಾನ್ ಕೂಡ ನಿರಾಶೆಯನ್ನು ವ್ಯಕ್ತಪಡಿಸಿದ್ದರು.

3 / 7
ಇದಾಗಿ ದಿನ ಕಳೆಯುವುದರಲ್ಲಿ ಆಯ್ಕೆ ಸಮಿತಿಗೆ ಸರ್ಫರಾಝ್ ಖಾನ್ ಬ್ಯಾಟ್ ಮೂಲಕ ಉತ್ತರ ನೀಡಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಕೇವಲ 66 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

4 / 7
ಈ ವೇಳೆ ಕಣಕ್ಕಿಳಿದ ಸರ್ಫರಾಜ್ ಖಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಿದ್ದ ಯುವ ಆಟಗಾರ ಕೇವಲ 135 ಎಸೆತಗಳಲ್ಲಿ ಶತಕ ಪೂರೈಸಿದರು. ಇತ್ತ ಸರ್ಫರಾಜ್ ಖಾನ್ ಸೆಂಚುರಿ ಸಿಡಿಸುತ್ತಿದ್ದಂತೆ ಅತ್ತ ಮುಂಬೈ ಕೋಚ್ ಅಮೋಲ್ ಮುಜುಂದಾರ್ ತಮ್ಮ ಕ್ಯಾಪ್ ತೆಗೆದು ಗೌರವ ಸೂಚಿಸಿದ್ದು ವಿಶೇಷವಾಗಿತ್ತು.

5 / 7
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 37 ಪಂದ್ಯಗಳನ್ನಾಡಿರುವ ಸರ್ಫರಾಜ್ ಖಾನ್ 3380+ ರನ್​ಗಳಿಸಿದ್ದಾರೆ. ಈ ವೇಳೆ 13 ಭರ್ಜರಿ ಶತಕ ಹಾಗೂ 9 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಅಂದರೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ 80.47 ಸರಾಸರಿ ಹೊಂದಿರುವ ಸರ್ಫರಾಝ್ ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರು. ಇದಾಗ್ಯೂ ಅವರನ್ನು ಬಾಂಗ್ಲಾದೇಶ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಿಗೆ ಆಯ್ಕೆ ಮಾಡಿಲ್ಲ.

6 / 7
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 37 ಪಂದ್ಯಗಳನ್ನಾಡಿರುವ ಸರ್ಫರಾಜ್ ಖಾನ್ 3380+ ರನ್​ಗಳಿಸಿದ್ದಾರೆ. ಈ ವೇಳೆ 13 ಭರ್ಜರಿ ಶತಕ ಹಾಗೂ 9 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಅಂದರೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ 82ರ ಸರಾಸರಿ ಹೊಂದಿರುವ ಸರ್ಫರಾಝ್ ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರು. ಇದಾಗ್ಯೂ ಅವರನ್ನು ಬಾಂಗ್ಲಾದೇಶ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಿಗೆ ಆಯ್ಕೆ ಮಾಡಿಲ್ಲ.

7 / 7
ಅತ್ತ ಪ್ರಥಮ ದರ್ಜೆ ಕ್ರಿಕೆಟ್​ನ ಅಂಕಿ ಅಂಶಗಳನ್ನು ಪರಿಗಣಿಸದೇ ಕೆಲ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇದನ್ನೇ ಪ್ರಶ್ನಿಸಿ ಅನೇಕರು ಬಿಸಿಸಿಐ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹರಿಹಾಯ್ದಿದ್ದರು. ಇದೀಗ ಖುದ್ದು ಸರ್ಫರಾಝ್ ಖಾನ್ 117+ ರನ್​ಗಳಿಸುವ ಮೂಲಕ ಆಯ್ಕೆ ಸಮಿತಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

Published On - 5:04 pm, Tue, 17 January 23