AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕಾಶ್ಮೀರದಲ್ಲಿ ತರಬೇತಿ; 17 ಕೆಜಿ ತೂಕ ಇಳಿಸಿಕೊಂಡ ಸರ್ಫರಾಜ್ ಖಾನ್

Sarfaraz Khan's Gritty Comeback: ಸಾಯಿ ಸುದರ್ಶನ್ ಗಾಯದಿಂದಾಗಿ ಟೀಂ ಇಂಡಿಯಾ ಟೆಸ್ಟ್‌ ತಂಡಕ್ಕೆ ಸರ್ಫರಾಜ್ ಖಾನ್ ಎರಡು ವರ್ಷಗಳ ನಂತರ ಮರಳಿದ್ದಾರೆ. ತಂಡದಿಂದ ಕೈಬಿಡಲ್ಪಟ್ಟ ನಂತರ, ಸರ್ಫರಾಜ್ ಭಾರತ ಎ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಐಪಿಎಲ್, ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ್ದರು. ಕಾಶ್ಮೀರದಲ್ಲಿ ತರಬೇತಿ, 17 ಕೆಜಿ ತೂಕ ಇಳಿಕೆ ಮಾಡಿ ಕಠಿಣ ಪರಿಶ್ರಮದಿಂದ ಆಯ್ಕೆಯಾಗಿದ್ದಾರೆ. ಶ್ರೀಲಂಕಾದ ಸ್ಪಿನ್ ಪಿಚ್‌ಗಳಿಗೆ ಅವರ ಆಯ್ಕೆ ನಿರ್ಣಾಯಕ.

ಪೃಥ್ವಿಶಂಕರ
|

Updated on: Aug 10, 2026 | 10:50 PM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಗಾಯದಿಂದ ಚೇತರಿಸಿಕೊಳ್ಳದ ಸಾಯಿ ಸುದರ್ಶನ್ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಎರಡು ವರ್ಷಗಳ ನಂತರ ಸರ್ಫರಾಜ್ ಖಾನ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಆದರೆ ತಂಡಕ್ಕೆ ಮರಳಲು ಸರ್ಫರಾಜ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ(PC-PTI).

1 / 5
2024 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್ ಖಾನ್ ಅವರನ್ನು ಭಾರತ ತಂಡದಿಂದ ಕೈಬಿಡಲಾಯಿತು. ನಂತರ ಸರ್ಫರಾಜ್ ಖಾನ್ ಭಾರತ ಎ ತಂಡದೊಂದಿಗೆ ಇಂಗ್ಲೆಂಡ್ ಪ್ರವಾಸ ಮಾಡಿ, ಅಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧ 92 ರನ್​ಗಳ ಇನ್ನಿಂಗ್ಸ್ ಆಡಿದರು. ಆ ಬಳಿಕ ಭಾರತ ಮತ್ತು ಭಾರತ ಎ ನಡುವಿನ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿಯೂ ಶತಕ ಬಾರಿಸಿದ್ದರು. ಇದರ ಹೊರತಾಗಿಯೂ, ಸರ್ಫರಾಜ್​ಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಗಲಿಲ್ಲ(PC-PTI).

2 / 5
ಹೀಗಾಗಿ ಐಪಿಎಲ್​ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಸರ್ಫರಾಜ್​ಗೆ ಸಿಎಸ್​ಕೆ ತಂಡದಲ್ಲಿ ಅವಕಾಶ ಸಿಕ್ಕಿತ್ತಾದರೂ ಅದರಲ್ಲೂ ಸರ್ಫರಾಜ್ ಅವರ ಪ್ರದರ್ಶನ ಮಿಶ್ರವಾಗಿತ್ತು. ಹೀಗಾಗಿ ಸರ್ಫರಾಜ್​ರನ್ನು ಪ್ಲೇಯಿಂಗ್​ 11 ನಿಂದ ಕೈಬಿಡಲಾಯಿತು. ಐಪಿಎಲ್‌ ನಂತರ ಮುಂಬೈ ಟಿ20 ಲೀಗ್‌ನಲ್ಲಿ ಭಾಗವಹಿಸಿದ್ದ ಸರ್ಫರಾಜ್ ಉತ್ತಮ ಪ್ರದರ್ಶನ ನೀಡಿದರು(PC-PTI).

3 / 5
ಆದಾಗ್ಯೂ, ಲೀಗ್ ಮುಗಿದ ನಂತರ, ಮುಂಬೈನಲ್ಲಿ ಮಳೆ ಪ್ರಾರಂಭವಾಯಿತು. ಇದರಿಂದಾಗಿ ಸರ್ಫರಾಜ್ ತಮ್ಮ ಅಭ್ಯಾಸಕ್ಕಾಗಿ ಕಾಶ್ಮೀರಕ್ಕೆ ತೆರಳಿದರು. ಜಮ್ಮು ಮತ್ತು ಕಾಶ್ಮೀರದ ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಸರ್ಫರಾಜ್ ತಮ್ಮ ಬ್ಯಾಟಿಂಗ್ ಕೌಶಲ್ಯದ ಮೇಲೆ ಕೆಲಸ ಮಾಡಿದರು. ಇದರ ಜೊತೆಗೆ ಸರ್ಫರಾಜ್ ಒಂದೂವರೆ ವರ್ಷದಲ್ಲಿ ಬರೋಬ್ಬರಿ 17 ಕೆಜಿ ತೂಕ ಕೂಡ ಇಳಿಸಿಕೊಂಡರು(PC-PTI).

4 / 5
ಇಷ್ಟೆಲ್ಲ ಪ್ರಯತ್ನಗಳ ನಡುವೆಯೂ ಸರ್ಫರಾಜ್​ಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಸಾಯಿ ಸುದರ್ಶನ್ ಗಾಯದಿಂದಾಗಿ ಸರ್ಫರಾಜ್​ಗೆ ಟೀಂ ಇಂಡಿಯಾದ ಬಾಗಿಲು ತೆಗೆದಿದೆ. ಸ್ಪಿನ್ನರ್​ಗಳ ವಿರುದ್ಧ ಅತ್ಯುತ್ತಮವಾಗಿ ಬ್ಯಾಟ್ ಬೀಸುವ ಸರ್ಫರಾಜ್​ಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಏಕೆಂದರೆ ಲಂಕಾ ಪಿಚ್​ಗಳು ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುತ್ತವೆ. ಹೀಗಾಗಿ ಸ್ಪಿನ್ನರ್​ಗಳನ್ನು ದಿಟ್ಟವಾಗಿ ಎದುರಿಸುವ ಸರ್ಫರಾಜ್ ತಂಡದಲ್ಲಿ ಇದ್ದರೆ ಒಳಿತು(PC-PTI).

5 / 5
Follow Us
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!

ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?

ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!

ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!

Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್

‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ

ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..