AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂನ್ಯದೊಂದಿಗೆ ಶತಕ… ವಿಶೇಷ ದಾಖಲೆ ಬರೆದ ಸರ್ಫರಾಝ್ ಖಾನ್

Sarfaraz Khan Record: ಇರಾನಿ ಕಪ್​ ಪಂದ್ಯದಲ್ಲಿ ಡಬಲ್ ಸೆಂಚುರಿ ಸಿಡಿಸಿ ಮಿಂಚಿದ್ದ ಸರ್ಫರಾಝ್ ಖಾನ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಪೂರೈಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 19, 2024 | 11:13 AM

Share
ಮೊದಲ ಇನಿಂಗ್ಸ್​ನಲ್ಲಿ ಸೊನ್ನೆ... ಎರಡನೇ ಇನಿಂಗ್ಸ್​ನಲ್ಲಿ ಸೆಂಚುರಿ... ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಶೂನ್ಯ-ಶತಕದೊಂದಿಗೆ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ ಶೂನ್ಯಕ್ಕೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಶೂನ್ಯದೊಂದಿಗೆ ಶತಕ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೆ ಸರ್ಫರಾಝ್ ಖಾನ್ ಸೇರ್ಪಡೆಯಾಗಿದ್ದಾರೆ.

2 / 6
ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸರ್ಫರಾಝ್ ಖಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಗಬ್ಬರ್ ಖ್ಯಾತಿಯ ಶಿಖರ್ ಧವನ್.

3 / 6
2014 ರಲ್ಲಿ ಆಕ್ಲೆಂಡ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಮೊದಲ ಇನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ 115 ರನ್ ಬಾರಿಸಿ ಮಿಂಚಿದ್ದರು. ಈ ಮೂಲಕ ಕಿವೀಸ್ ವಿರುದ್ಧ ಶೂನ್ಯದೊಂದಿಗೆ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಈ ದಾಖಲೆ ಪಟ್ಟಿಗೆ ಸರ್ಫರಾಝ್ ಖಾನ್ ಕೂಡ ಸೇರ್ಪಡೆಯಾಗಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಟೀಮ್ ಇಂಡಿಯಾದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಹಾಗೆಯೇ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 183 ಆಟಗಾರರು ಮಾತ್ರ ಸೊನ್ನೆ ಜೊತೆಗೆ ಶತಕ ಸಿಡಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ. ಈ ಶೂನ್ಯ-ಶತಕದ ದಾಖಲೆ ಪಟ್ಟಿಯಲ್ಲಿ ಇದೀಗ 183ನೇ ಬ್ಯಾಟರ್​ ಆಗಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದಾರೆ.

6 / 6

Published On - 11:13 am, Sat, 19 October 24

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ