ಶೂನ್ಯದೊಂದಿಗೆ ಶತಕ… ವಿಶೇಷ ದಾಖಲೆ ಬರೆದ ಸರ್ಫರಾಝ್ ಖಾನ್
Sarfaraz Khan Record: ಇರಾನಿ ಕಪ್ ಪಂದ್ಯದಲ್ಲಿ ಡಬಲ್ ಸೆಂಚುರಿ ಸಿಡಿಸಿ ಮಿಂಚಿದ್ದ ಸರ್ಫರಾಝ್ ಖಾನ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಪೂರೈಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ.
1 / 6
ಮೊದಲ ಇನಿಂಗ್ಸ್ನಲ್ಲಿ ಸೊನ್ನೆ... ಎರಡನೇ ಇನಿಂಗ್ಸ್ನಲ್ಲಿ ಸೆಂಚುರಿ... ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಶೂನ್ಯ-ಶತಕದೊಂದಿಗೆ ಎಂಬುದು ವಿಶೇಷ.
2 / 6
ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸರ್ಫರಾಝ್ ಶೂನ್ಯಕ್ಕೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಶೂನ್ಯದೊಂದಿಗೆ ಶತಕ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೆ ಸರ್ಫರಾಝ್ ಖಾನ್ ಸೇರ್ಪಡೆಯಾಗಿದ್ದಾರೆ.
3 / 6
ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸರ್ಫರಾಝ್ ಖಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಗಬ್ಬರ್ ಖ್ಯಾತಿಯ ಶಿಖರ್ ಧವನ್.
4 / 6
2014 ರಲ್ಲಿ ಆಕ್ಲೆಂಡ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಮೊದಲ ಇನಿಂಗ್ಸ್ನಲ್ಲಿ ಸೊನ್ನೆಗೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ 115 ರನ್ ಬಾರಿಸಿ ಮಿಂಚಿದ್ದರು. ಈ ಮೂಲಕ ಕಿವೀಸ್ ವಿರುದ್ಧ ಶೂನ್ಯದೊಂದಿಗೆ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.
5 / 6
ಇದೀಗ ಈ ದಾಖಲೆ ಪಟ್ಟಿಗೆ ಸರ್ಫರಾಝ್ ಖಾನ್ ಕೂಡ ಸೇರ್ಪಡೆಯಾಗಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಟೀಮ್ ಇಂಡಿಯಾದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಹಾಗೆಯೇ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 183 ಆಟಗಾರರು ಮಾತ್ರ ಸೊನ್ನೆ ಜೊತೆಗೆ ಶತಕ ಸಿಡಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ. ಈ ಶೂನ್ಯ-ಶತಕದ ದಾಖಲೆ ಪಟ್ಟಿಯಲ್ಲಿ ಇದೀಗ 183ನೇ ಬ್ಯಾಟರ್ ಆಗಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದಾರೆ.
Published On - 11:13 am, Sat, 19 October 24