AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಸರ್ಫರಾಝ್ ಖಾನ್

Royal Challengers Bengaluru vs Chennai Super Kings: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​​ಸಿಬಿ 43 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on:Apr 06, 2026 | 9:20 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಸರ್ಫರಾಝ್ ಖಾನ್ (Sarfaraz Khan) ಬರೆದಿದ್ದಾರೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸ್ಫೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು.

2 / 5
ಈ ಬೃಹತ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 10 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಆರ್​ಸಿಬಿ ಬೌಲರ್​ಗಳನ್ನು ದಂಡಿಸಿದ ಸರ್ಫರಾಝ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಪವರ್​ಪ್ಲೇನಲ್ಲೇ ಅರ್ಧಶತಕ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡರು. ಅಂದರೆ ಐಪಿಎಲ್​ನಲ್ಲಿ 4ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಕಣಕ್ಕಿಳಿದು ಮೊದಲ 6 ಓವರ್​ಗಳಲ್ಲಿ ಯಾವುದೇ ಬ್ಯಾಟರ್ ಅರ್ಧಶತಕ ಪೂರೈಸಿರಲಿಲ್ಲ.

4 / 5
2023 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ತಿಲಕ್ ವರ್ಮಾ ಪವರ್​ಪ್ಲೇನಲ್ಲೇ 43 ರನ್​ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಇದೀಗ ಪವರ್​ಪ್ಲೇನಲ್ಲೇ ಪವರ್​ಫುಲ್ ಬ್ಯಾಟಿಂಗ್ ಪ್ರದರ್ಶಿಸಿ ಸರ್ಫರಾಝ್ ಖಾನ್ ಅರ್ಧಶತಕದೊಂದಿಗೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 5

Published On - 9:19 am, Mon, 6 April 26

Follow Us
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!

ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್

ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ