AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿ ಸೆಂಚುರಿ… ಸರ್ಫರಾಝ್ ಖಾನ್ ವಿಶ್ವ ದಾಖಲೆ

Sarfaraz Khan World Record: ದೇಶೀಯ ಅಂಗಳದಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ರಣಜಿ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಸರ್ಫರಾಝ್ ಖಾನ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಯಾವುದೇ ಭಾರತೀಯ ಬ್ಯಾಟರ್ ನಿರ್ಮಿಸಿರದ ದಾಖಲೆಯೊಂದಿಗೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jan 24, 2026 | 2:10 PM

Share
ಸರ್ಫರಾಝ್ ಖಾನ್ (Sarfaraz Khan) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದೇಶೀಯ ಅಂಗಳದಲ್ಲಿ ಒಂದೇ ಸೀಸನ್​ನಲ್ಲಿ ಮೂರು ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಗಳೊಂದಿಗೆ ವಿಶೇಷ ಸಾಧನೆಗೈದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

1 / 7
ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ 219 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 227 ರನ್​ ಬಾರಿಸಿ ಅಬ್ಬರಿಸಿದ್ದಾರೆ.

2 / 7
ಇದಕ್ಕೂ ಮುನ್ನ ನಡೆದ ವಿಜಯ್ ಹಝಾರೆ ಏಕದಿನ ಟೂರ್ನಿಯಲ್ಲಿ ಗೋವಾ ವಿರುದ್ಧದ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸರ್ಫರಾಝ್ ಖಾನ್ ಕೇವಲ 75 ಎಸೆತಗಳಲ್ಲಿ 14 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 157 ರನ್ ಬಾರಿಸಿದ್ದರು. 

3 / 7
ಈ ಮೇಲಿನ ಎರಡು ಶತಕಗಳಿಗೂ ಮುನ್ನ ಸರ್ಫರಾಝ್ ಖಾನ್ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅಸ್ಸಾಂ ವಿರುದ್ಧ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂರು ಶತಕಗಳೊಂದಿಗೆ ಇದೀಗ ಸರ್ಫರಾಝ್ ಖಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 7
ಅಂದರೆ ಒಂದೇ ಸೀಸನ್​ನಲ್ಲಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದ್ವಿಶತಕ, ಲಿಸ್ಟ್ ಎ (ಏಕದಿನ) ಕ್ರಿಕೆಟ್​ನಲ್ಲಿ 150 ಹಾಗೂ ಟಿ20 ಕ್ರಿಕೆಟ್​ನಲ್ಲಿ 100 ರನ್ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 7
ಇದಕ್ಕೂ ಮುನ್ನ ಇಂಗ್ಲೆಂಡ್​ ಡೇನಿಯಲ್ ಬೆಲ್-ಡ್ರಮಂಡ್ ಹಾಗೂ ಅಲೆಕ್ಸ್ ಹೇಲ್ಸ್ ಮಾತ್ರ ಈ ಸಾಧನೆ ಮಾಡಿದ್ದರು.  2016 ಮತ್ತು 2023 ರಲ್ಲಿ ಡೇನಿಯಲ್ ಬೆಲ್-ಡ್ರಮಂಡ್ ಒಂದೇ ಸೀಸನ್​ನಲ್ಲೂ ಮೂರು ಸ್ವರೂಪಗಳಲ್ಲಿ 200+, 150+, 100+ ರನ್​ ಗಳಿಸಿದ್ದರು. ಇದಾದ ಬಳಿಕ 2017 ರಲ್ಲಿ ಅಲೆಕ್ಸ್ ಹೇಲ್ಸ್ ಈ ಸಾಧನೆ ಸರಿಗಟ್ಟಿದ್ದರು.

6 / 7
ಇದೀಗ ಸರ್ಫರಾಝ್ ಖಾನ್ 2025-26 ರ ದೇಶೀಯ ಸೀಸನ್​ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 200+, ಏಕದಿನ ಕ್ರಿಕೆಟ್​ನಲ್ಲಿ 150+ ರನ್, ಟಿ20 ಕ್ರಿಕೆಟ್​ನಲ್ಲಿ 100+ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶೇಷ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

7 / 7

Published On - 2:08 pm, Sat, 24 January 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ

ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!

ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ

ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ

ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್

ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?