AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buchi Babu 2025: ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದ ಸರ್ಫರಾಜ್ ಖಾನ್

Sarfaraz Khan's Century: ಬುಚಿ ಬಾಬು 2025 ಪಂದ್ಯಾವಳಿಯಲ್ಲಿ ಸರ್ಫರಾಜ್ ಖಾನ್ ಅವರ ಅದ್ಭುತ ಶತಕ ಎಲ್ಲರ ಗಮನ ಸೆಳೆದಿದೆ. ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆಯಾಗದ ನಂತರ ತೂಕ ಇಳಿಸಿಕೊಂಡ ಸರ್ಫರಾಜ್, 92 ಎಸೆತಗಳಲ್ಲಿ 100 ರನ್ ಗಳಿಸಿದ್ದಾರೆ. ಈ ಶತಕದ ಮೂಲಕ ಅವರು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Aug 18, 2025 | 3:47 PM

Share
ಬುಚಿ ಬಾಬು 2025 ಪಂದ್ಯಾವಳಿ ಆರಂಭವಾಗಿದೆ. ಈ ಪಂದ್ಯಾವಳಿಯನ್ನು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಆಗಸ್ಟ್ 18 ರಿಂದ ಸೆಪ್ಟೆಂಬರ್ 9 ರವರೆಗೆ ಆಯೋಜಿಸುತ್ತಿದೆ. ಪಂದ್ಯಾವಳಿಯಲ್ಲಿ 16 ತಂಡಗಳು ಭಾಗವಹಿಸುತ್ತಿದ್ದು, ಇವುಗಳನ್ನು ತಲಾ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಸುತ್ತು 1 ರಲ್ಲಿ, ಟಿಎನ್‌ಸಿಎ ಇಲೆವೆನ್ ಮತ್ತು ಮುಂಬೈ ಗೋಜನ್ ಕಾಲೇಜು ಬಿ ಮೈದಾನದಲ್ಲಿ ಸ್ಪರ್ಧಿಸುತ್ತಿವೆ. ಈ ಪಂದ್ಯದ ಮೊದಲ ದಿನದಂದೇ ಸರ್ಫರಾಜ್ ಖಾನ್ ಶತಕ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

1 / 6
ಮುಂಬೈ ತಂಡದ ಪರ5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗಿಳಿದಿದ್ದ ಸರ್ಫರಾಜ್ ಖಾನ್ ಶತಕ ತಮ್ಮ ಪೂರೈಸಿದರು. ವಾಸ್ತವವಾಗಿ ಸರ್ಫರಾಜ್ ಬ್ಯಾಟಿಂಗ್ ಮಾಡಲು ಬಂದಾಗ ಮುಂಬೈ ತಂಡ 98 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತು . ಇದರ ನಂತರ, ಸರ್ಫರಾಜ್ ಖಾನ್ ತಂಡದ ಇನ್ನಿಂಗ್ಸ್ ನಿಭಾಯಿಸಿ ಬಿರುಸಿನ ಶತಕ ಸಿಡಿಸಿದರು.

2 / 6
ಸರ್ಫರಾಜ್ ಕೇವಲ 92 ಎಸೆತಗಳಲ್ಲಿ 100 ರನ್‌ಗಳ ಗಡಿ ತಲುಪಿದರು. ಈ ಸಮಯದಲ್ಲಿ, ಅವರು 9 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳನ್ನು ಸಹ ಹೊಡೆದರು. ಈ ಇನ್ನಿಂಗ್ಸ್ ಸರ್ಫರಾಜ್ ಖಾನ್‌ಗೆ ಹಲವು ವಿಧಗಳಲ್ಲಿ ವಿಶೇಷವಾಗಿದೆ, ಏಕೆಂದರೆ ಇತ್ತೀಚೆಗೆ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿರಲಿಲ್ಲ.

3 / 6
ಸರ್ಫರಾಜ್ ಖಾನ್ ಕೆಲವು ಸಮಯದಿಂದ ತಮ್ಮ ಫಿಟ್ನೆಸ್ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ . ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನಂತರ ತಮ್ಮ ಫಿಟ್ನೆಸ್ ಮೇಲೆ ಸಾಕಷ್ಟು ಕೆಲಸ ಮಾಡಿರುವ ಸರ್ಫರಾಜ್ ಖಾನ್ ಕೇವಲ ಒಂದೂವರೆ ತಿಂಗಳಲ್ಲಿ ಸುಮಾರು 17 ಕೆಜಿ ತೂಕ ಇಳಿಸಿಕೊಳ್ಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು.

4 / 6
ತೂಕ ಇಳಿಸಿಕೊಂಡ ನಂತರ ಇದು ಅವರ ಮೊದಲ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಅವರು ತಮ್ಮ ಛಾಪನ್ನು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಫರಾಜ್ ಖಾನ್ ಈಗ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ತವರು ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲಿದ್ದಾರೆ.

5 / 6
ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಕೂಡ ಈ ಪಂದ್ಯಾವಳಿಯಲ್ಲಿ ಮುಂಬೈ ತಂಡದ ಭಾಗವಾಗಿದ್ದಾರೆ. ಆದರೆ ಈ ಪಂದ್ಯಾವಳಿಯ ಆರಂಭಿಕ ಇನ್ನಿಂಗ್ಸ್‌ನಲ್ಲಿ ಅವರು ವಿಶೇಷವಾದದ್ದೇನೂ ಮಾಡಲು ಸಾಧ್ಯವಾಗಲಿಲ್ಲ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮುಶೀರ್ ಖಾನ್ 75 ಎಸೆತಗಳನ್ನು ಎದುರಿಸಿ ಕೇವಲ 30 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.

6 / 6
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ