AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

65 ವರ್ಷಗಳ ಹಳೆಯ ದಾಖಲೆಯನ್ನ ಸರಿಗಟ್ಟಿದ ಸೌದ್ ಶಕೀಲ್

Pakistan vs Bangladesh, 1st Test: ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ 41 ಓವರ್​ಗಳನ್ನು ಆಡಲಾಗಿದ್ದು, ಈ ವೇಳೆ 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದೆ. ಈ ಮೂಲಕ ಮೊದಲ ದಿನದಾಟದಲ್ಲಿ ಪಾಕ್ ಪಡೆ ಉತ್ತಮ ಪ್ರದರ್ಶನ ನೀಡಿದೆ.

ಝಾಹಿರ್ ಯೂಸುಫ್
|

Updated on: Aug 22, 2024 | 9:53 AM

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಸೌದ್ ಶಕೀಲ್ (Saud Shakeel) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 65 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ಕೇವಲ 16 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ಸೈಮ್ ಅಯ್ಯೂಬ್ (56) ಹಾಗೂ ಸೌದ್ ಶಕೀಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಅದರಲ್ಲೂ 92 ಎಸೆತಗಳನ್ನು ಎದುರಿಸಿದ ಸೌದ್ ಶಕೀಲ್ 5 ಫೋರ್​ಗಳೊಂದಿಗೆ ಅಜೇಯ 57 ರನ್ ಬಾರಿಸಿ ತಂಡಕ್ಕೆ ಆಸೆಯಾಗಿ ನಿಂತರು. ಈ ಅರ್ಧಶತಕದೊಂದಿಗೆ ಸೌದ್ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಅದು ಸಹ ಕೇವಲ 11 ಪಂದ್ಯಗಳ ಮೂಲಕ ಎಂಬುದು ವಿಶೇಷ.

3 / 6
ಇದರೊಂದಿಗೆ ಪಾಕಿಸ್ತಾನ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ಸೌದ್ ಶಕೀಲ್ ಸರಿಗಟ್ಟಿದ್ದರು. ಇದಕ್ಕೂ ಮುನ್ನ ಈ ದಾಖಲೆ ಸಯೀದ್ ಅಹ್ಮದ್ ಅವರ ಹೆಸರಿನಲ್ಲಿತ್ತು. ಇದೀಗ 6 ದಶಕಗಳ ಹಳೆಯ ದಾಖಲೆಯನ್ನು ಸೌದ್ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
1959 ರಲ್ಲಿ ಸಯೀದ್ ಅಹ್ಮದ್ 20 ಇನಿಂಗ್ಸ್​ಗಳ ಮೂಲಕ 1000 ರನ್​ ಪೂರೈಸಿ ಪಾಕಿಸ್ತಾನ್ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು. ಇದಾದ ಬಳಿಕ ಈ ದಾಖಲೆಯನ್ನು ಸರಿಗಟ್ಟಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.

5 / 6
ಇದೀಗ ಎಡಗೈ ದಾಂಡಿಗ ಸೌದ್ ಶಕೀಲ್ ಈ ಸಾಧನೆಯನ್ನು ಪುನರಾವರ್ತಿಸುವಲ್ಲಿ ಯಶಸ್ವಿಯಾಗಿದ್ದಾರೆ. 11 ಟೆಸ್ಟ್ ಪಂದ್ಯಗಳಲ್ಲಿ 20 ಇನಿಂಗ್ಸ್ ಆಡಿರುವ ಸೌದ್ 1024	 ರನ್ ಕಲೆಹಾಕಿದ್ದಾರೆ. ಈ ಮೂಲಕ 65 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿ ಸೌದ್ ಶಕೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 6
Follow us
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್

ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!

ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ

ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು