Saud Shakeel: ಸಚಿನ್, ಸೆಹ್ವಾಗ್ ದಾಖಲೆ ಸರಿಗಟ್ಟಿದ ಸೌದ್ ಶಕೀಲ್
Saud Shakeel: ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.
Updated on: Jul 18, 2023 | 10:11 PM

ಗಾಲೆಯ ಇಂಟರ್ನ್ಯಾಷನ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನಿ ಬ್ಯಾಟ್ಸ್ಮನ್ ಸೌದ್ ಶಕೀಲ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ. 361 ಎಸೆತಗಳನ್ನು ಎದುರಿಸಿದ ಸೌದ್ 19 ಫೋರ್ಗಳೊಂದಿಗೆ ಅಜೇಯ 208 ರನ್ ಬಾರಿಸಿದರು.

ಇದರೊಂದಿಗೆ ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

ಅಂದರೆ ಶ್ರೀಲಂಕಾದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿರುವುದು ಕೇವಲ ಮೂವರು ಬ್ಯಾಟರ್ಗಳು ಮಾತ್ರ. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟ್ಸ್ಮನ್ ಆಗಿ ಸೌದ್ ಶಕೀಲ್ ಎಂಟ್ರಿ ಕೊಟ್ಟಿದ್ದಾರೆ.

2008 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಶ್ರೀಲಂಕಾ ವಿರುದ್ಧ ಗಾಲೆ ಟೆಸ್ಟ್ನಲ್ಲಿ 208 ರನ್ ಬಾರಿಸಿ ಅಬ್ಬರಿಸಿದ್ದರು.

ಇನ್ನು 2010 ರಲ್ಲಿ ಸಚಿನ್ ತೆಂಡೂಲ್ಕರ್ ಕೊಲಂಬೊ ಟೆಸ್ಟ್ನಲ್ಲಿ 203 ರನ್ ಬಾರಿಸಿ ಮಿಂಚಿದ್ದರು. ಅಂದರೆ ಇದುವರೆಗೆ ಲಂಕಾ ವಿರುದ್ಧ ಅವರದ್ದೇ ನೆಲದಲ್ಲಿ ದ್ವಿಶತಕ ಬಾರಿಸಿದ ಏಷ್ಯನ್ ಬ್ಯಾಟರ್ಗಳು ಎಂಬ ದಾಖಲೆ ಸಚಿನ್-ಸೆಹ್ವಾಗ್ ಹೆಸರಿನಲ್ಲಿತ್ತು.

ಇದೀಗ ಆತಿಥೇಯ ಶ್ರೀಲಂಕಾ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಬಳಿಕ ಈ ಸಾಧನೆ ಮಾಡಿದ 3ನೇ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸೌದ್ ಶಕೀಲ್ ಪಾತ್ರರಾಗಿದ್ದಾರೆ.

ಹಾಗೆಯೇ ಶ್ರೀಲಂಕಾದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 4ನೇ ಬ್ಯಾಟರ್ ಎಂಬ ದಾಖಲೆ ಕೂಡ ಸೌದ್ ಶಕೀಲ್ ಪಾಲಾಗಿದೆ. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ (208), ಸಚಿನ್ ತೆಂಡೂಲ್ಕರ್ (203) ಹಾಗೂ ಜೋ ರೂಟ್ (228) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಸೌದ್ ಶಕೀಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
