AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ಬರೆದ ಸೆದಿಖುಲ್ಲಾ ಅಟಲ್

Emerging Asia cup 2024: ಉದಯೋನ್ಮುಖ ತಂಡಗಳ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು ಬಗ್ಗು ಬಡಿದು ಅಫ್ಘಾನಿಸ್ತಾನ್ ಎ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿದ್ದ ಸೆದಿಖುಲ್ಲಾ ಅಟಲ್ 5 ಅರ್ಧಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 29, 2024 | 12:23 PM

Share
ಉದಯೋನ್ಮುಖ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಅಫ್ಘಾನಿಸ್ತಾನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಅಫ್ಘಾನ್ ಪಡೆ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಅಫ್ಘಾನಿಸ್ತಾನ್ ತಂಡದ ಈ ಗೆಲುವಿನ ರೂವಾರಿ ಸೆದಿಖುಲ್ಲಾ ಅಟಲ್.

1 / 5
ಅಫ್ಘಾನಿಸ್ತಾನ್ ಪರ ಆರಂಭಿಕನಾಗಿ ಕಣಕ್ಕಿಳಿದ ಸೆದಿಖುಲ್ಲಾ ಅಟಲ್ 5 ಪಂದ್ಯಗಳಿಂದ ಕಲೆಹಾಕಿದ್ದು ಬರೋಬ್ಬರಿ 368 ರನ್​ಗಳು. ಈ ಮೂಲಕ ಎಮರ್ಜಿಂಗ್ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ಅಫ್ಘಾನಿಸ್ತಾನದ 23 ವರ್ಷದ ಯುವ ದಾಂಡಿಗ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಚರಿತ್ ಅಸಲಂಕಾ ಹೆಸರಿನಲ್ಲಿತ್ತು. 2017 ರ ಎಮರ್ಜಿಂಗ್ ಏಷ್ಯಾಕಪ್​ನಲ್ಲಿ ಅಸಲಂಕಾ 338 ರನ್​ಗಳನ್ನು ಕಲೆಹಾಕಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಸೆದಿಖುಲ್ಲಾ ಅಟಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಈ ಬಾರಿ ಎಮರ್ಜಿಂಗ್ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿರುವ ಸೆದಿಖುಲ್ಲಾ ಅಟಲ್ 5 ಇನಿಂಗ್ಸ್​ಗಳಲ್ಲೂ ಅರ್ಧಶತಕ ಬಾರಿಸಿದ್ದು ವಿಶೇಷ. ಈ ಮೂಲಕ 368 ರನ್​ ಕಲೆಹಾಕಿದ್ದಾರೆ. ಇದೇ ವೇಳೆ 23 ಫೋರ್ ಹಾಗೂ 19 ಸಿಕ್ಸ್​ಗಳನ್ನು ಸಹ ಸಿಡಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸೆದಿಖುಲ್ಲಾ ಅಟಲ್ ಅಫ್ಘಾನಿಸ್ತಾನ್ ಹಿರಿಯರ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಅಂದಹಾಗೆ ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿದೆ. 2013 ರಲ್ಲಿ ರಾಹುಲ್ ಒಟ್ಟು 321 ರನ್​ ಗಳಿಸುವ ಮೂಲಕ ಈ ದಾಖಲೆ ಬರೆದಿದ್ದಾರೆ. ಕಳೆದ 11 ವರ್ಷಗಳಿಂದ ಈ ದಾಖಲೆಯನ್ನು ಮುರಿಯಲು ಭಾರತದ ಯಾವುದೇ ಕಿರಿಯ ಬ್ಯಾಟರ್​ಗೆ ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

5 / 5
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​