ಟೀಮ್ ಇಂಡಿಯಾ ನಾಯಕತ್ವಕ್ಕಾಗಿ ಹಿರಿಯ ಆಟಗಾರನ ತೆರೆಮರೆಯ ಪ್ರಯತ್ನ

Updated on: May 06, 2025 | 1:30 PM

Rohit Sharma: ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ ತಂಡ 5 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಈ ವೇಳೆ ಟೀಮ್ ಇಂಡಿಯಾ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರಾ ಎಂಬುದೇ ಈಗ ಕುತೂಹಲ.

1 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಗಾಗಿ ಬಿಸಿಸಿಐ 35 ಆಟಗಾರರ ಶಾರ್ಟ್ ಲಿಸ್ಟ್​ ಮಾಡಿಕೊಂಡಿದೆ. ಈ ಪಟ್ಟಿಯಿಂದ 18 ಆಟಗಾರರು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿದೆ. ಅಲ್ಲದೆ ಈ ಸರಣಿಯ ಮೂಲಕ ಭಾರತ ಟೆಸ್ಟ್ ತಂಡದ ನಾಯಕನನ್ನು ಸಹ ಬದಲಿಸಲು ಬಿಸಿಸಿಐ ಚಿಂತಿಸಿದೆ.

2 / 6
ಇಂಗ್ಲೆಂಡ್ ವಿರುದ್ಧದ ಸರಣಿಗೆ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಿದ್ದು, ಇದಾಗ್ಯೂ ಅವರಿಗೆ ನಾಯಕತ್ವ ನೀಡುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಹಾಗೆಯೇ ಉಪನಾಯಕನನ್ನು ಸಹ ಬದಲಿಸಲು ಬಿಸಿಸಿಐ ಚರ್ಚಿಸಿದೆ. ಇಲ್ಲಿ ರೋಹಿತ್ ಶರ್ಮಾ ಅವರನ್ನು ಈ ಸರಣಿಗೆ ನಾಯಕನಾಗಿ ಮುಂದುವರೆಸಿದರೂ, ಉಪನಾಯಕ ಬದಲಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

3 / 6
ಪ್ರಸ್ತುತ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಅವರ ಬದಲಿಗೆ ಉಪನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡುವ ಬಗ್ಗೆ ಕೂಡ ಚರ್ಚಿಸಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ  ವೈಸ್ ಕ್ಯಾಪ್ಟನ್ ಆಗಿ ಗಿಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 6
ಮತ್ತೊಂದೆಡೆ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಳ್ಳಲು ಹಿರಿಯ ಆಟಗಾರರೊಬ್ಬರು ಆಸಕ್ತಿ ತೋರಿದ್ದಾರೆ. ಈ ಹಿಂದೊಮ್ಮೆ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಆಟಗಾರರೊಬ್ಬರು ಮತ್ತೆ ನಾಯಕನಾಗಲು ಆಸಕ್ತಿ ವ್ಯಕ್ತಪಡಿಸಿದ್ದು, ಇದಾಗ್ಯೂ ಈ ಕೋರಿಕೆಯನ್ನು ಬಿಸಿಸಿಐ ನಯವಾಗಿ ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.

5 / 6
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಹಿರಿಯ ಆಟಗಾರರೊಬ್ಬರು ಕ್ಯಾಪ್ಟನ್ ಪಟ್ಟಕ್ಕಾಗಿ ತೆರೆಮರೆಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಈ ವೇಳೆ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ಹೆಸರುಳು ಕೇಳಿ ಬಂದಿದ್ದವು.

6 / 6
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಮತ್ತೆ ಹಿರಿಯ ಆಟಗಾರೊಬ್ಬರು ನಾಯಕತ್ವಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರರಿಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಭಾರತ ಟೆಸ್ಟ್ ತಂಡದ ನಾಯಕ ಹಾಗೂ ಉಪನಾಯಕ ಬದಲಾದರೂ ಅಚ್ಚರಿಪಡಬೇಕಿಲ್ಲ.